ಶಿವಮೊಗ್ಗ: ಜಿಲ್ಲೆ ಮತ್ತು ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಶಿವಮೊಗ್ಗದ ಜೀವನಾಡಿಯಾಗಿರುವ ತುಂಗಾ ನದಿ ಮೈದುಂಬಿ ಹರಿಯುತ್ತಿರುವ ಈ ಸಂದರ್ಭದಲ್ಲಿ, ನದಿಯ ಸಮೃದ್ಧಿ ಮತ್ತು ಪ್ರಕೃತಿಯ ಕುರಿತು ಕೃತಜ್ಞತೆ ಸಲ್ಲಿಸುವ ಸಲುವಾಗಿ ಶಿವಮೊಗ್ಗದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. ಬಿಜೆಪಿ ಶಿವಮೊಗ್ಗ ನಗರ ಸಮಿತಿ ವತಿಯಿಂದ ಕೋರ್ಪಲಯ್ಯ ಛತ್ರ ಮಂಟಪದಲ್ಲಿ ‘ತುಂಗಾ ನದಿಗೆ ಬಾಗಿನ ಅರ್ಪಣೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಭಾಗವಹಿಸಿ, ತಾಯಿ ತುಂಗೆಗೆ ಭಕ್ತಿಪೂರ್ವಕವಾಗಿ ಬಾಗಿನ ಅರ್ಪಿಸಿದರು. ತುಂಗಾ ನದಿಯು ರಾಜ್ಯದ ಕೃಷಿ, ಕುಡಿಯುವ ನೀರು ಮತ್ತು ಪರಿಸರ ಸಮತೋಲನಕ್ಕೆ ಪ್ರಮುಖ ಮೂಲವಾಗಿದೆ. ನದಿಗೆ ಬಾಗಿನ ಅರ್ಪಿಸುವ ಸಂಸ್ಕೃತಿಯು ನಮ್ಮ ನಾಡಿನ ನದಿ ಪೂಜೆಯ ಸುದೀರ್ಘ ಪರಂಪರೆಯ ಪ್ರತಿಬಿಂಬವಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶ್ರೀ ಜಗದೀಶ್, ನಗರಾಧ್ಯಕ್ಷ ಶ್ರೀ ಮೋಹನ್ ರೆಡ್ಡಿ, ಜಿಲ್ಲೆ ಮತ್ತು ನಗರ ಸಮಿತಿಯ ಪ್ರಮುಖರು, ವಿವಿಧ ಮೋರ್ಚಾಗಳ ಸದಸ್ಯರು, ಧಾರ್ಮಿಕ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಹಲವು ನಾಗರಿಕರು ಉಪಸ್ಥಿತರಿದ್ದರು.
ಇದನ್ನು ಓದಿ : ಶಿವಮೊಗ್ಗ : ಐ ಆಮ್ ಸಾರಿ ಅಪ್ಪ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಮದುವೆಯಾದ ಮೊದಲ ವರ್ಷದಲ್ಲೇ ಯುವಕ ಆತ್ಮಹತ್ಯೆ!! – ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ
ಜಾಹಿರಾತು:
WhatsApp Number : 7795829207
Leave a Reply