ಶಿವಮೊಗ್ಗ : ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಂದು, ಜುಲೈ 4, 2025 ರಂದು ಅಂಗನವಾಡಿ, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ತಹಸೀಲ್ದಾರ್ ವಿ.ಎಸ್ ರಾಜೀವ್ ರವರು ಈ ಕುರಿತು ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ರಜೆ ನೀಡಲಾಗಿದೆ.
ಪ್ರಮುಖ ಸೂಚನೆ: ರಜೆಯ ಕಾರಣದಿಂದ ತಪ್ಪಿಹೋಗುವ ಪಾಠ ಪ್ರವಚನಗಳನ್ನು ಮುಂದಿನ ರಜಾ ದಿನಗಳಲ್ಲಿ ನಡೆಸುವ ಮೂಲಕ ಸರಿದೂಗಿಸಿಕೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ.
ಇನ್ನೂ ಈಗಾಗಲೇ ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ಆಯಾ ತಾಲೂಕಿನ ತಹಸೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ವೀಕ್ಷಿಸುತ್ತಿರಿ!
ಜಾಹಿರಾತು:
WhatsApp Number : 7795829207
Leave a Reply