ಹೊಸನಗರ : ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಂದು ಕೂಡ, ಜುಲೈ 4, 2025 ರಂದು ಅಂಗನವಾಡಿ, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ತಹಸೀಲ್ದಾರ್ ರಶ್ಮಿ ಹಾಲೇಶ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ರಜೆ ನೀಡಲಾಗಿದೆ.
ಪ್ರಮುಖ ಸೂಚನೆ: ರಜೆಯ ಕಾರಣದಿಂದ ತಪ್ಪಿಹೋಗುವ ಪಾಠ ಪ್ರವಚನಗಳನ್ನು ಮುಂದಿನ ರಜಾ ದಿನಗಳಲ್ಲಿ ನಡೆಸುವ ಮೂಲಕ ಸರಿದೂಗಿಸಿಕೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ವೀಕ್ಷಿಸುತ್ತಿರಿ!
ಜಾಹಿರಾತು:
WhatsApp Number : 7795829207
Leave a Reply