ಶಿವಮೊಗ್ಗ: ಸಾಗರ ತಾಲೂಕಿನ ಎಲ್.ಬಿ. ನಗರದಲ್ಲಿ 25 ವರ್ಷದ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆಕಾಶ್ ಆಚಾರ್ಯ ಎಂದು ಗುರುತಿಸಲಾದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನು ಓದಿ: ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು! ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ
ಜಾಹಿರಾತು:
ಘಟನೆಯ ವಿವರಗಳು:
ಆಕಾಶ್ ಆಚಾರ್ಯ ಅವರ ಪೋಷಕರು ಕೆಲಸಕ್ಕೆ ಹೋಗಿದ್ದಾಗ ಮತ್ತು ಪತ್ನಿ ತವರು ಮನೆಗೆ ತೆರಳಿದ್ದಾಗ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ಸಂಭವಿಸಿದೆ. ಸಾಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದಾಗ, ಆಕಾಶ್ ಅವರು ಬರೆದಿದ್ದ ಡೆತ್ ನೋಟ್ ಪತ್ತೆಯಾಗಿದೆ. ಆ ಪತ್ರದಲ್ಲಿ “ಐ ಆಮ್ ಸಾರಿ ಅಪ್ಪ ಅಮ್ಮ” ಎಂದು ಬರೆಯಲಾಗಿತ್ತು ಎಂದು ತಿಳಿದುಬಂದಿದೆ.
ಪೊಲೀಸ್ ತನಿಖೆ:
ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸಾಗರ ಪೊಲೀಸರು ಘಟನೆಯ ಕುರಿತು ತನಿಖೆಯನ್ನು ನಡೆಸುತ್ತಿದ್ದಾರೆ.
WhatsApp Number : 7795829207
Leave a Reply