ಶಿವಮೊಗ್ಗದ ರಾಗಿಗುಡ್ಡದಲ್ಲಿ ಗಣಪತಿ ವಿಗ್ರಹಕ್ಕೆ ಅಪಮಾನ: ಸ್ಥಳದಲ್ಲಿ ಬಿಗುವಿನ ವಾತಾವರಣ!

ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕೆಲವು ಕಿಡಿಗೇಡಿಗಳು ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕೃತ್ಯದಿಂದಾಗಿ ಪ್ರದೇಶದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಜಾಹಿರಾತು:

ಇದನ್ನು ಓದಿ : ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು!!ಪೂರ್ತಿ ಓದಲು ಕ್ಲಿಕ್ ಮಾಡಿ.

ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಜಿ.ಕೆ.ಮಿಥುನ್ ಕುಮಾರ್, ಶಿವಮೊಗ್ಗ ಸಬ್ ಡಿವಿಜನ್-2 ಡಿವೈಎಸ್ಪಿ ಸಂಜೀವ್ ಕುಮಾರ್, ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಐ ಸತ್ಯನಾರಾಯಣ ಮತ್ತು ಜಯನಗರ ಠಾಣೆ ಪಿಐ ಸಿದ್ದೇಗೌಡ ಭೇಟಿ ನೀಡಿದ್ದಾರೆ.

ಸ್ಥಳೀಯರೊಂದಿಗೆ ಮಾತನಾಡಿದ ಹಿರಿಯ ಪೊಲೀಸ್ ಅಧಿಕಾರಿಗಳು, ದೂರು ನೀಡುವಂತೆ ಸೂಚಿಸಿದ್ದು, ತಪ್ಪಿತಸ್ಥರನ್ನು ಶೀಘ್ರವೇ ಬಂಧಿಸುವುದಾಗಿ ಭರವಸೆ ನೀಡಿದ್ದಾರೆ. ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳದಂತೆ ತಡೆಯಲು ಬಂಗಾರಪ್ಪ ಬಡಾವಣೆಯಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಾಧ್ಯಮಗಳಿಗೆ ಮಾಹಿತಿ ನೀಡಿದ ಎಸ್ಪಿ ಮಿಥುನ್ ಕುಮಾರ್ ಅವರು, “ಪ್ರಾಥಮಿಕ ಹಂತದಲ್ಲಿ ವಿಗ್ರಹವನ್ನು ಕೆಳಗೆ ಬೀಳಿಸಲಾಗಿತ್ತು. ಅದನ್ನು ಈಗ ಯಥಾಸ್ಥಿತಿಗೆ ತರಲಾಗಿದೆ. ಸಾರ್ವಜನಿಕರ ಬಳಿ ಇಬ್ಬರು ವ್ಯಕ್ತಿಗಳು ಮಾತನಾಡಿರುವ ವಿಡಿಯೋ ಲಭ್ಯವಿದೆ. ಅದರ ಪರಿಶೀಲನೆ ನಡೆಸಿದ ನಂತರ, ಯಾರು ಈ ಕೃತ್ಯ ಎಸಗಿದ್ದಾರೆ ಮತ್ತು ಅದರ ಹಿಂದಿನ ಉದ್ದೇಶವೇನು ಎಂಬುದು ತಿಳಿಯಲಿದೆ,” ಎಂದು ಹೇಳಿದರು.

ಈ ಘಟನೆ ಸ್ಥಳೀಯ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದನ್ನು ಓದಿ : ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ: ಆರೋಗ್ಯ ಇಲಾಖೆಯಲ್ಲಿ 6,770 ‘ಡಿ’ ದರ್ಜೆ ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್!! ವಿವರವಾಗಿ ಓದಲು ಕ್ಲಿಕ್ ಮಾಡಿ.

ಜಾಹಿರಾತು:

ಇಂತಹ ಇನ್ನಷ್ಟು ಆಸಕ್ತಿದಾಯಕ ಮತ್ತು ಉಪಯುಕ್ತ ಮಾಹಿತಿಗಳನ್ನು ಪಡೆಯಲು ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ವೆಬ್ ಚಾನೆಲ್‌ನೊಂದಿಗೆ ಸಂಪರ್ಕದಲ್ಲಿರಿ.

WhatsApp Number : 7795829207


Leave a Reply

Your email address will not be published.