ವಸತಿ ಶಾಲೆಗಳಲ್ಲಿ ಬಾಲ್ಯ ವಿವಾಹ, ಪೋಕ್ಸೋ ನಿಯಂತ್ರಣ: ಶಿಕ್ಷಕರಿಗೆ ‘ಮಿಷನ್‌ ಸುರಕ್ಷಾ’ ತರಬೇತಿ

ಶಿಕಾರಿಪುರ: ಬಾಲ್ಯ ವಿವಾಹಗಳು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ವಸತಿ ಶಾಲೆ ಹಾಗೂ ನಿಲಯಗಳ ಸಿಬ್ಬಂದಿ ಪಾತ್ರ ಅತ್ಯಂತ ನಿರ್ಣಾಯಕ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಎಚ್‌. ಗಣೇಶ್ ಒತ್ತಿ ಹೇಳಿದರು. ವಿದ್ಯಾರ್ಥಿನಿಯರ ಚಟುವಟಿಕೆಗಳ ಮೇಲೆ ಶಿಕ್ಷಕರು ನಿರಂತರ ನಿಗಾ ಇಡುವುದರಿಂದ ಇಂತಹ ಅಕ್ರಮಗಳನ್ನು ಪರಿಣಾಮಕಾರಿಯಾಗಿ ತಡೆಯಬಹುದು ಎಂದರು.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ಸೋಮವಾರ ಶಿಕಾರಿಪುರದಲ್ಲಿ ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಸತಿ ಶಾಲೆ, ವಸತಿ ನಿಲಯಗಳ ಮೇಲ್ವಿಚಾರಕರು, ಕಾವಲುಗಾರರು, ಅಡುಗೆ ಸಿಬ್ಬಂದಿ ಮತ್ತು ಆರೋಗ್ಯ ಸಹಾಯಕರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಬಾಲ್ಯ ವಿವಾಹ ತಡೆಗೆ ಗಮನಿಸಬೇಕಾದ ಅಂಶಗಳು:

ಗಣೇಶ್ ಅವರು ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಗಮನಿಸಬೇಕಾದ ಪ್ರಮುಖ ಸೂಚನೆಗಳನ್ನು ನೀಡಿದರು:

  • ವಿದ್ಯಾರ್ಥಿನಿಯರು ಅತಿ ಹೆಚ್ಚು ದಿನ ರಜೆ ತೆಗೆದುಕೊಳ್ಳಲು ಸಿದ್ಧತೆ ನಡೆಸಿದ್ದರೆ.
  • ನಿತ್ಯ ಶಾಲೆಗೆ ಹಾಜರಾಗದೆ ಗೈರುಹಾಜರಿಯಾಗುತ್ತಿದ್ದರೆ.
  • ಹೆಚ್ಚು ಸಮಯ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರೆ.
  • ವಸತಿ ಶಾಲೆ ಅಥವಾ ನಿಲಯಕ್ಕೆ ವಿದ್ಯಾರ್ಥಿನಿಯರ ಭೇಟಿಗೆ ಆಗಮಿಸುವ ವ್ಯಕ್ತಿಗಳ ಮೇಲೆ.

ಈ ಎಲ್ಲ ವಿಷಯಗಳ ಕುರಿತು ಸೂಕ್ಷ್ಮವಾಗಿ ಗಮನ ವಹಿಸಿದರೆ ಬಾಲ್ಯ ವಿವಾಹಗಳನ್ನು ಯಶಸ್ವಿಯಾಗಿ ತಡೆಯಲು ಸಾಧ್ಯ ಎಂದರು.

ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ ಮೇಲೆ ದಾಳಿ! ಮೂವರು ಸೆರೆ, ಪೊಲೀಸರ ಸ್ಪಷ್ಟ ಸಂದೇಶ

ಪೋಕ್ಸೋ ಕಾಯ್ದೆ ಮತ್ತು ‘ಮಿಷನ್ ಸುರಕ್ಷಾ’:

ಇದೇ ವೇಳೆ ಮಾತನಾಡಿದ ಬಿಸಿಎಂ ಜಿಲ್ಲಾ ಅಧಿಕಾರಿ ಶೋಭಾ, ಪೋಕ್ಸೋ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. “ಪ್ರಕರಣಗಳು ಬೆಳಕಿಗೆ ಬಂದರೆ ಮರ್ಯಾದೆ ಹೋಗುತ್ತದೆ” ಎಂಬ ಕಾರಣಕ್ಕೆ ದೂರು ನೀಡಲು ಹಿಂದೇಟು ಹಾಕುವುದು ದುಷ್ಟರಿಗೆ ಮತ್ತಷ್ಟು ಕುಮ್ಮಕ್ಕು ನೀಡಿದಂತಾಗುತ್ತದೆ. ಇದನ್ನು ತಡೆಯಲು ಸರ್ಕಾರ ಪೋಕ್ಸೋ ಕಾಯ್ದೆ ಜಾರಿಗೊಳಿಸಿದೆ. ಈ ಕಾಯ್ದೆಯಡಿ ದೌರ್ಜನ್ಯಕ್ಕೊಳಗಾದ ಬಾಲಕಿಯ ಯಾವುದೇ ಗುರುತು ಪತ್ತೆಯಾಗದಂತೆ ರಕ್ಷಣೆ ನೀಡಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಬಾಲಕಿಯರ ಮೇಲಿನ ದೌರ್ಜನ್ಯಗಳನ್ನು ಸಂಪೂರ್ಣವಾಗಿ ಇಲ್ಲವಾಗಿಸುವ ಉದ್ದೇಶದಿಂದ ‘ಮಿಷನ್‌ ಸುರಕ್ಷಾ’ ಎಂಬ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಮಹತ್ಕಾರ್ಯದಲ್ಲಿ ವಸತಿ ನಿಲಯಗಳು, ವಸತಿ ಶಾಲೆಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ನಾಗರಿಕರು ಕೈಜೋಡಿಸಬೇಕು ಎಂದು ಶೋಭಾ ಅವರು ಮನವಿ ಮಾಡಿದರು.

ಇದನ್ನು ಓದಿ : ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ವಿಶೇಷ ವರದಿ!   ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.