ರಿಪ್ಪನ್‌ಪೇಟೆಯಲ್ಲಿ ವಿಟಮಿನ್ ‘ಎ’ ಡ್ರಾಪ್ಸ್ ಸೇವಿಸಿ 11ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ: ಮೆಗ್ಗಾನ್‌ಗೆ ರವಾನೆ! 🚨

ರಿಪ್ಪನ್‌ಪೇಟೆ; ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿರೇಸಾನಿ ಅಂಗನವಾಡಿ ಕೇಂದ್ರದಲ್ಲಿ ಆತಂಕಕಾರಿ ಘಟನೆ ನಡೆದಿದೆ. ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ‘ಎ’ ಡ್ರಾಪ್ಸ್ ಸೇವಿಸಿದ 11ಕ್ಕೂ ಹೆಚ್ಚು ಮಕ್ಕಳು ವಾಂತಿ, ಬೇಧಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ಈ ಘಟನೆ ಮಂಗಳವಾರ ನಡೆದಿದ್ದು, ಮಕ್ಕಳು ತೀವ್ರ ನಿತ್ರಾಣಗೊಂಡಿದ್ದಾರೆ.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ಏನಾಯ್ತು?

ಇರುಳುಗಣ್ಣು ನಿವಾರಣೆಗಾಗಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ವಿಟಮಿನ್ ‘ಎ’ ಡ್ರಾಪ್ಸ್ ನೀಡಲಾಗುತ್ತದೆ. ಅದರಂತೆ ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ 6 ವರ್ಷದೊಳಗಿನ ಮಕ್ಕಳಿಗೆ ಮಂಗಳವಾರದಂದು ಈ ಡ್ರಾಪ್ಸ್ ನೀಡಿದ್ದರು. ಅಂದೇ ಸಂಜೆ ಮಕ್ಕಳಲ್ಲಿ ವಾಂತಿ ಮತ್ತು ಬೇಧಿ ಕಾಣಿಸಿಕೊಂಡಿದೆ.

ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ ಮೇಲೆ ದಾಳಿ! ಮೂವರು ಸೆರೆ, ಪೊಲೀಸರ ಸ್ಪಷ್ಟ ಸಂದೇಶ

ತಕ್ಷಣದ ಕ್ರಮಗಳು:

ಮಕ್ಕಳು ಅಸ್ವಸ್ಥಗೊಂಡ ತಕ್ಷಣ ಪೋಷಕರು ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಪರಿಸ್ಥಿತಿ ಉಲ್ಬಣಗೊಂಡ ಪರಿಣಾಮದಿಂದಾಗಿ ಮಕ್ಕಳು ತೀವ್ರ ನಿತ್ರಾಣಗೊಂಡಿದ್ದು, ತಕ್ಷಣ ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನು ಓದಿ : ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ವಿಶೇಷ ವರದಿ!   ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ

ಅಧಿಕಾರಿಗಳ ದೌಡು:

ಘಟನೆ ಸುದ್ದಿ ಹರಡುತ್ತಿದ್ದಂತೆ, ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಹೊಸನಗರ ಸಿಡಿಪಿಓ ಕಚೇರಿ ಅಧಿಕಾರಿಗಳು ಸೇರಿದಂತೆ ಇತರ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಿರೇಸಾನಿ ಅಂಗನವಾಡಿ ಕೇಂದ್ರಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನು ಓದಿ: ಶಿವಮೊಗ್ಗದಲ್ಲಿ ವಾಟ್ಸಾಪ್ ಮೆಸೇಜ್ ಮೂಲಕ ಸೈಬರ್ ವಂಚನೆ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಕಳವು!!

ಘಟನೆಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗುತ್ತಿದ್ದಂತೆ ನಾವು ನಿಮಗೆ ತಿಳಿಸುತ್ತೇವೆ.

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.