ಹರತಾಳು ಹಾಲಪ್ಪ: 6 ದಶಕಗಳ ಶರಾವತಿ ಸಂತ್ರಸ್ತರ ಶಾಪ ವಿಮೋಚನೆಗೆ ಮುಹೂರ್ತ: ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಸಜ್ಜು!!

ಶಿವಮೊಗ್ಗ; ಶರಾವತಿ ಸಂತ್ರಸ್ತರ ಆರು ದಶಕಗಳ ದೀರ್ಘ ಹೋರಾಟಕ್ಕೆ ಫಲ ಸಿಕ್ಕಿದ್ದು, ಅಂಬರಗೋಡ್ಲು – ಕಳಸವಳ್ಳಿ – ಸಿಗಂದೂರು ಸಂಪರ್ಕ ಸೇತುವೆಯ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಇದನ್ನು ‘ಶಾಪ ವಿಮೋಚನೆಯ ಮಂಗಳ ಕಾರ್ಯಕ್ರಮ’ ಎಂದು ಬಣ್ಣಿಸಿದ್ದು, ಈ ಐತಿಹಾಸಿಕ ಕ್ಷಣಕ್ಕೆ ರಾಜ್ಯದ ಜನತೆ ಸಾಕ್ಷಿಯಾಗುವಂತೆ ಕರೆ ನೀಡಿದ್ದಾರೆ.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ಸೇತುವೆ ಉದ್ಘಾಟನಾ ಕಾರ್ಯಕ್ರಮದ ವಿವರಗಳು:

  •  ಅಂಬರಗೋಡ್ಲು – ಕಳಸವಳ್ಳಿ – ಸಿಗಂದೂರು ಸಂಪರ್ಕ ಸೇತುವೆ.
  • ದಿನಾಂಕ: ಜುಲೈ 14, ಸೋಮವಾರ.
  • ಸಭಾ ಕಾರ್ಯಕ್ರಮ: ಮಧ್ಯಾಹ್ನ 12 ಗಂಟೆಗೆ ಸಾಗರದ ನೆಹರು ಮೈದಾನದಲ್ಲಿ ನಡೆಯಲಿದೆ.
  • ಸೇತುವೆಯ ಉದ್ದ: 2125 ಮೀಟರ್.

ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !!

ಉದ್ಘಾಟಿಸುವ ಗಣ್ಯರು:

ಕೇಂದ್ರ ಭೂ ಸಾರಿಗೆ ಸಚಿವ ಶ್ರೀ ನಿತಿನ್ ಗಡ್ಕರಿ, ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪ, ಸಂಸದ ಶ್ರೀ ಬಿ.ವೈ ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯದ ಹಿರಿಯ ಮುತ್ಸದ್ದಿ ನಾಯಕರಗಳ ಸಮ್ಮುಖದಲ್ಲಿ ಸೇತುವೆ ಲೋಕಾರ್ಪಣೆಗೊಳ್ಳಲಿದೆ.

ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ ಮೇಲೆ ದಾಳಿ! ಮೂವರು ಸೆರೆ, ಪೊಲೀಸರ ಸ್ಪಷ್ಟ ಸಂದೇಶ

ಇದನ್ನು ಓದಿ : ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ವಿಶೇಷ ವರದಿ! ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ

ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಮಾತನಾಡಿ, “ಜಿಲ್ಲೆಯ ಜನರು, ತಾಯಿ ಚೌಡೇಶ್ವರಿ ದೇವಿಯ ಭಕ್ತ ವೃಂದದವರು ಅತಿಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಿಕೊಡಬೇಕು” ಎಂದು ಮನವಿ ಮಾಡಿದ್ದಾರೆ.

ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ.

ಇದನ್ನು ಓದಿ: ಶಿವಮೊಗ್ಗದಲ್ಲಿ ವಾಟ್ಸಾಪ್ ಮೆಸೇಜ್ ಮೂಲಕ ಸೈಬರ್ ವಂಚನೆ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಕಳವು!!

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.