ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್!!

ಶಿವಮೊಗ್ಗ; ಶಿವಮೊಗ್ಗದಲ್ಲಿ ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ನಡೆದ ಕಿರಿಕ್ ಕೊಲೆಯಲ್ಲಿ ಅಂತ್ಯವಾಗಿದೆ. ಶಿವಮೊಗ್ಗದ ಬೊಮ್ಮನಕಟ್ಟೆ ಇ-ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ಪವನ್ (28) ಎಂಬ ಯುವಕನನ್ನ ಬರ್ಬರವಾಗಿ ಕೊಲೆಯಾಗಿದೆ. ಶಿವಕುಮಾರ್ ಎಂಬುವರ ಮನೆಯಲ್ಲೇ ಈ ಘಟನೆ ನಡೆದಿದೆ. ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿರುವ ಶಿವಕುಮಾರ್ ಮನೆಗೆ ಪವನ್ ತೆರಳಿದ್ದನು.

ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ ಮೇಲೆ ದಾಳಿ! ಮೂವರು ಸೆರೆ, ಪೊಲೀಸರ ಸ್ಪಷ್ಟ ಸಂದೇಶ

 

ಇದನ್ನು ಓದಿ : ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ವಿಶೇಷ ವರದಿ!   ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ

ಕುಡಿದ ನಂತರದಲ್ಲಿ ಸ್ನೇಹಿತರ ನಡುವೆ ಗಲಾಟೆ ನಡೆದು, ಅದು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಶಿವಕುಮಾರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಇದನ್ನು ಓದಿ: ಶಿವಮೊಗ್ಗದಲ್ಲಿ ವಾಟ್ಸಾಪ್ ಮೆಸೇಜ್ ಮೂಲಕ ಸೈಬರ್ ವಂಚನೆ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಕಳವು!!

ಘಟನಾ ಸ್ಥಳಕ್ಕೆ ಎಸ್ಪಿ ಜಿ.ಕೆ. ಮಿಥುನ್ ಕುಮಾರ್, ಶಿವಮೊಗ್ಗ ಸಬ್ ಡಿವಿಜನ್-2 ಡಿವೈಎಸ್ಪಿ ಸಂಜೀವ್ ಕುಮಾರ್ ಭೇಟಿ ನೀಡಿದ್ದಾರೆ. ವಿನೋಬನಗರ ಇನ್ಸ್‌ಪೆಕ್ಟರ್ ಡಿ.ಕೆ. ಸಂತೋಷ್ ಕುಮಾರ್ ಅವರಿಂದ ಎಸ್ಪಿ ಮಾಹಿತಿ ಪಡೆದಿದ್ದಾರೆ.

ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ನಡೆದ ಪವನ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳಕ್ಕೆ ಬೆರಳಚ್ಚು ಮತ್ತು ಫಾರೆನ್ಸಿಕ್ ತಜ್ಞರ ತಂಡ ಭೇಟಿ ನೀಡಿದೆ. ಕೊಲೆಯಾದ ಸ್ಥಳದಲ್ಲಿ ಮಾಹಿತಿಯನ್ನ ತಂಡ ಕಲೆಹಾಕಿದೆ. ಇವಿಷ್ಟು ಪ್ರಾಥಮಿಕ ಮಾಹಿತಿಗಳಾಗಿವೆ.

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.