ಬೆಂಗಳೂರು: ರಾಜ್ಯದ ಮಹಾನಗರಪಾಲಿಕೆ ನೌಕರರ ಸಂಘ ನಡೆಸುತ್ತಿದ್ದ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ. ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್ ಅವರು ವಿಕಾಸಸೌಧದಲ್ಲಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ಬಹುತೇಕ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ನಂತರ ನೌಕರರು ಮುಷ್ಕರವನ್ನು ಕೈಬಿಡಲು ನಿರ್ಧರಿಸಿದ್ದಾರೆ.
ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??
ನಗರಸಭೆ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ ಮತ್ತು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಮಹಾನಗರ ಪಾಲಿಕೆಗಳ ಸಾಮಾನ್ಯ ನೇಮಕಾತಿ ನಿಯಮಗಳು 2011ಕ್ಕೆ ಸಮಗ್ರ ತಿದ್ದುಪಡಿ, ನೌಕರರನ್ನು ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ನೌಕರರೆಂದು ಪರಿಗಣಿಸುವುದು, ಕೆಜಿಐಡಿ, ಜಿಐಎಸ್ ಮತ್ತು ಜಿಪಿಎಫ್ ಸೌಲಭ್ಯಗಳನ್ನು ವಿಸ್ತರಿಸುವುದು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಮಂಡಿಸಲಾಯಿತು.
ಇದನ್ನು ಓದಿ: ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!
ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ಬೈರತಿ ಸುರೇಶ್, “ಪಾಲಿಕೆ ನೌಕರರಿಗೆ ಸಕಾಲಕ್ಕೆ ವೇತನ ನೀಡುವುದು ಮತ್ತು ಸಿ & ಆರ್ ನಿಯಮಗಳಿಗೆ ತಿದ್ದುಪಡಿ ತರುವ ಕುರಿತು ಆರ್ಥಿಕ ಇಲಾಖೆಯ ಅನುಮೋದನೆ ಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.
ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ರೈಲು ಸಂಖ್ಯೆ 06583 ಕೆಎಸ್‌ಆರ್ ಬೆಂಗಳೂರು – ಹಾಸನ ಡೆಮು ರೈಲು:
ನಿಯಂತ್ರಣ ಅವಧಿ: ಜುಲೈ 16, 18, 21, 23, 25, ಹಾಗೂ ಜುಲೈ 28 ರಿಂದ ಆಗಸ್ಟ್ 1, 2025 ರವರೆಗೆ ಮತ್ತು ಆಗಸ್ಟ್ 4 ರಿಂದ ಆಗಸ್ಟ್ 8, 2025 ರವರೆಗೆ ಹೊರಡುವ ಈ ರೈಲು ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ.
ಇದನ್ನು ಓದಿ: ಶಾಕಿಂಗ್: ₹2 ಲಕ್ಷ ಸಾಲಕ್ಕೆ, ಹೆಂಡತಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ! 😱
ಪ್ರಮುಖ ನಿರ್ಧಾರಗಳು ಮತ್ತು ಭರವಸೆಗಳು:
ಪೌರಾಡಳಿತ ಆಯುಕ್ತರ ಹುದ್ದೆ ಸೃಜನೆ: ಕಾನೂನು ಪರಿಮಿತಿಯೊಳಗೆ ವಲಯ ಆಯುಕ್ತರ ಹುದ್ದೆಗಳನ್ನು ಸೃಜಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಆರ್ಥಿಕ ಇಲಾಖೆಯ ಅಭಿಪ್ರಾಯ ಬಂದ ತಕ್ಷಣ ಕ್ರಮ ವಹಿಸಲಾಗುವುದು.
ಪರಿಸರ ಇಂಜಿನಿಯರ್ ನೇಮಕ: ಮಹಾನಗರಪಾಲಿಕೆಗಳಲ್ಲಿ ಖಾಲಿ ಇರುವ ಪರಿಸರ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಗೆ ಅನುಮೋದನೆ ನೀಡುವಂತೆ ಸೂಚಿಸಲಾಗಿದೆ.
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಗುಂಪು ವಿಮೆ ಯೋಜನೆ (ಜಿಐಎಸ್): ಸರ್ಕಾರಿ ನೌಕರರ ಮಾದರಿಯಲ್ಲಿ ಪಾಲಿಕೆ ನೌಕರರಿಗೂ ಗುಂಪು ವಿಮೆ ಯೋಜನೆ ಜಾರಿಗೆ ತರಲು ಸರ್ಕಾರ ಮುಕ್ತ ಮನಸ್ಸು ಹೊಂದಿದೆ. ವಿಮಾ ಕಂತಿನ ನೌಕರರ ಪಾಲಿನ ಮೊತ್ತವನ್ನು ಅವರು ಪಾವತಿಸಲು ಸಿದ್ಧವಿದ್ದು, ಉಳಿದ ಮೊತ್ತವನ್ನು ಪಾಲಿಕೆಗಳು ಭರಿಸುವ ಬಗ್ಗೆ ಉನ್ನತಾಧಿಕಾರಿಗಳು ಪರಿಶೀಲಿಸಲಿದ್ದಾರೆ.
ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು: ಪ್ರತಿ ವರ್ಷ ಪಾಲಿಕೆ ನೌಕರರಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಪಾಲಿಕೆಗಳಿಂದಲೇ ವೆಚ್ಚ ಭರಿಸಲು ಸೂಚಿಸಲಾಗಿದೆ.
ಇದನ್ನು ಓದಿ: ಸಾಗರದಲ್ಲಿ ಭೀಕರ ಅಪಘಾತ: ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ, ಇಬ್ಬರಿಗೆ ಗಾಯ!
ಜ್ಯೋತಿ ಸಂಜೀವಿನಿ ಆರೋಗ್ಯ ವಿಮೆ: ಸರ್ಕಾರಿ ನೌಕರರಿಗೆ ಜಾರಿಯಲ್ಲಿರುವ ಜ್ಯೋತಿ ಸಂಜೀವಿನಿ ಆರೋಗ್ಯ ವಿಮೆಯನ್ನು ಪಾಲಿಕೆ ನೌಕರರಿಗೂ ವಿಸ್ತರಿಸಲು ಸಹಮತ ವ್ಯಕ್ತಪಡಿಸಲಾಗಿದೆ. ನೌಕರರು ತಮ್ಮ ಪಾಲಿನ ವಿಮಾ ಮೊತ್ತ ಮತ್ತು ಅದಕ್ಕೆ ಸಮಾನವಾದ ಮೊತ್ತವನ್ನು ಪಾಲಿಕೆಗಳು ಭರಿಸುವ ಸಾಧಕ-ಬಾಧಕಗಳನ್ನು ಪರಿಶೀಲಿಸಲಾಗುವುದು. ಅಲ್ಲದೆ, ನೌಕರರ ಚಿಕಿತ್ಸಾ ವೆಚ್ಚವನ್ನು ಮಂಜೂರು ಮಾಡುವ ಅಧಿಕಾರವನ್ನು ಆಯಾ ಪಾಲಿಕೆಗಳ ಆಯುಕ್ತರಿಗೆ ನೀಡುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಇದನ್ನು ಓದಿ: ಶರಾವತಿ ಮುಕುಟಕ್ಕೆ ಹೊಸ ಸೇತುವೆ ಸೊಬಗು: ಸಿಗಂಧೂರು ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಆರು ದಶಕಗಳ ಹೋರಾಟಕ್ಕೆ ಮುಕ್ತಿ!
ಸಚಿವರ ಭರವಸೆಗಳ ಹಿನ್ನೆಲೆಯಲ್ಲಿ, ಷಡಕ್ಷರಿ ಮತ್ತು ಅಮೃತರಾಜ್ ಅವರು ಮುಷ್ಕರವನ್ನು ವಾಪಸ್ ಪಡೆದಿರುವುದಾಗಿ ಘೋಷಿಸಿ, ಸಚಿವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಈ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಮತ್ತು ಪೌರಾಡಳಿತ ನಿರ್ದೇಶಕರಾದ ಪ್ರಭುಲಿಂಗ ಕವಳಿಕಟ್ಟಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಬೆಳವಣಿಗೆಯ ಬಗ್ಗೆ ನಿಮ್ಮ ಅಭಿಪ್ರಾಯಗಳೇನು? ಕಾಮೆಂಟ್‌ಗಳಲ್ಲಿ ತಿಳಿಸಿ.
ಹೆಚ್ಚಿನ ಮಾಹಿತಿ ಹಾಗೂ ಕ್ಷಣ ಕ್ಷಣದ ಶಿವಮೊಗ್ಗ ಸುದ್ದಿಗಳಿಗಾಗಿ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ವೀಕ್ಷಿಸುತ್ತಿರಿ.
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply