ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!

ಶಿವಮೊಗ್ಗ: ನಿನ್ನೆ (ಜುಲೈ 14) ಅದ್ದೂರಿಯಾಗಿ ನಡೆದ ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭವು, ಅಭಿವೃದ್ಧಿ ವಿಚಾರಕ್ಕಿಂತ ಹೆಚ್ಚಾಗಿ ರಾಜಕೀಯ ಅಪಪ್ರಚಾರ ಮತ್ತು ಸಣ್ಣತನದ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಕೆಲವು ರಾಜಕಾರಣಿಗಳ ವಿರುದ್ಧ ಅವರು ಪರೋಕ್ಷವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ ಅವರು, ಸಿಗಂದೂರು ಸೇತುವೆ ನಿರ್ಮಾಣದ ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದರೂ, ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದರೆ ಲಾಂಚ್ ಸಂಚಾರಕ್ಕೆ ಸಮಸ್ಯೆ ಆಗಬಹುದು ಎಂಬ ಮುನ್ನೆಚ್ಚರಿಕೆಯಿಂದ ಅಧಿವೇಶನಕ್ಕೂ ಮುನ್ನವೇ ಸೇತುವೆ ಉದ್ಘಾಟನೆ ನಡೆಸಲಾಯಿತು ಎಂದು ಸ್ಪಷ್ಟಪಡಿಸಿದರು.

ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !!

ಪಪ್ರಚಾರ ಮತ್ತು ಸಣ್ಣತನದ ಪ್ರದರ್ಶನ’ ಆರೋಪ:

“ಸೇತುವೆ ನಿರ್ಮಾಣವಾದರೂ ಸಹ ಇನ್ನೂ ಏಕೆ ಬಿಡುಗಡೆ ಮಾಡುತ್ತಿಲ್ಲ ಎಂದು ನಮ್ಮ ಜಿಲ್ಲೆಯ ರಾಜಕಾರಣಿಗಳು ಅಪಪ್ರಚಾರ ಮಾಡುತ್ತಿದ್ದರು. ಇದೇ ಕಾರಣದಿಂದಾಗಿ ಸೇತುವೆಯನ್ನು ಬೇಗ ಉದ್ಘಾಟಿಸಲಾಯಿತು. ಈ ವೇಳೆ, ಹತಾಶ ಮನೋಭಾವನೆಯಿಂದ ನಮ್ಮ ಜಿಲ್ಲೆಯ ರಾಜಕಾರಣಿಗಳು ಸಣ್ಣತನ ಪ್ರದರ್ಶಿಸಿದ್ದಾರೆ” ಎಂದು ರಾಘವೇಂದ್ರ ನೇರ ಆರೋಪ ಮಾಡಿದರು.

ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

ಜಾಹಿರಾತು:

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

‘ಅಪ್ಪನ ದುಡ್ಡಿನಿಂದ ಮಾಡಿಲ್ಲ’ ಹೇಳಿಕೆಗೆ ಬೇಸರ:

ಈ ಹಿಂದೆ ಶಾಸಕ ಬೇಳೂರು ಗೋಪಾಲಕೃಷ್ಣ ಮತ್ತು ಸಚಿವ ಮಧು ಬಂಗಾರಪ್ಪ ಇಬ್ಬರೂ ಸೇತುವೆಯನ್ನು ವೀಕ್ಷಿಸಲು ಹೋದಾಗ ತಮಗೆ ಸಂತೋಷವಾಗಿತ್ತು. “ಈಗಲಾದರೂ ಅಭಿವೃದ್ಧಿ ವಿಚಾರದಲ್ಲಿ ಸ್ಪರ್ಧೆ ಏರ್ಪಾಡಾಯ್ತಲ್ಲ” ಎಂದು ನಾನು ಸಂತೋಷಪಟ್ಟಿದ್ದೆ ಎಂದ ರಾಘವೇಂದ್ರ, ಆದರೆ “ಇಬ್ಬರೂ ಸೇತುವೆ ವಿಚಾರದಲ್ಲಿ ಹಗುರವಾಗಿ ಮಾತನಾಡಿ, ‘ಅಪ್ಪನ ದುಡ್ಡಿನಿಂದ ಮಾಡಿಲ್ಲ, ಯಾರಪ್ಪನ ಮನೆ ದುಡ್ಡು? ಟ್ರಂಪ್ ಕರೆಸಿ, ಮೋದಿ ಕರೆಸಿ’ ಎಂದು ಹಗುರವಾಗಿ ಮಾತನಾಡುವ ಪ್ರಯತ್ನ ಮಾಡಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು. ಅಭಿವೃದ್ಧಿ ಕಾರ್ಯಗಳನ್ನು ವೈಯಕ್ತಿಕಗೊಳಿಸಿ ಮಾತನಾಡುವುದು ಸರಿಯಲ್ಲ ಎಂದು ಅವರು ಪರೋಕ್ಷವಾಗಿ ಪ್ರತಿಪಕ್ಷಗಳ ಮುಖಂಡರನ್ನು ಟೀಕಿಸಿದರು.

ಇದನ್ನು ಓದಿ: ಶಾಕಿಂಗ್: ₹2 ಲಕ್ಷ ಸಾಲಕ್ಕೆ, ಹೆಂಡತಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ! 😱

ಮುಖ್ಯಮಂತ್ರಿಯ ದಾರಿ ತಪ್ಪಿಸಿದ್ರಾ?

“ಹೃದಯ ಶ್ರೀಮಂತಿಕೆ ಇರುವ ಮುಖ್ಯಮಂತ್ರಿಯವರನ್ನೂ ನಮ್ಮ ಜಿಲ್ಲೆಯ ಮುಖಂಡರು ದಾರಿ ತಪ್ಪಿಸುವ ರೀತಿ ಮಾಡಿದ್ದಾರೆ. ಹತಾಶ ಮನೋಭಾವದಿಂದಲೇ ಈ ರೀತಿ ಮಾಡಲಾಗಿದೆ. ಈ ಮೂಲಕ ನಮ್ಮ ಜಿಲ್ಲೆಯ ಮುಖಂಡರು ಮುಖ್ಯಮಂತ್ರಿಯವರನ್ನು ಕೂಡ ಸಣ್ಣವರನ್ನಾಗಿ ಮಾಡುವ ಕೆಲಸ ಆಗಿದೆ” ಎಂದು ಸಂಸದರು ಆಕ್ರೋಶ ಹೊರಹಾಕಿದರು.

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಉದ್ಘಾಟನಾ ಸಮಾರಂಭದಲ್ಲಿ ‘ಸ್ಮರಣಿಕೆ’ ಗಲಾಟೆ:

ಉದ್ಘಾಟನಾ ಸಮಾರಂಭದ ವೇಳೆ ನಡೆದ ಮತ್ತೊಂದು ಅಚ್ಚರಿಯ ಘಟನೆಯನ್ನು ರಾಘವೇಂದ್ರ ಬಹಿರಂಗಪಡಿಸಿದರು. ಕಾರ್ಯಕ್ರಮಕ್ಕೂ ಮುನ್ನವೇ ಐಪಿಎಸ್, ಐಎಎಸ್, ಮತ್ತು ಪಿಡಬ್ಲ್ಯೂಡಿ ಅಧಿಕಾರಿಗಳು “ನಾವು ವಾಪಸ್ ಹೋಗುತ್ತೇವೆ” ಎಂದು ಹೇಳಿದ್ದಲ್ಲದೆ, ಉದ್ಘಾಟನಾ ಸಮಾರಂಭಕ್ಕೆ ತರಲಾಗಿದ್ದ ಸ್ಮರಣಿಕೆಗಳು (ಮುಮೆಂಟೊ), ಶಾಲು ಮತ್ತು ಹಾರಗಳನ್ನು ಸಹ ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದರು. “ಕೇಂದ್ರ ಸಚಿವರು ವಿಮಾನದ ಬಗ್ಗೆ, ಹೆಲಿಕಾಪ್ಟರ್ ಹಾರುವ ಬಗ್ಗೆ ತಲೆಕೆಡಿಸಿಕೊಂಡಿದ್ದರೆ, ನನಗೆ ಶಾಲು ಇಲ್ಲ, ಹಾರ ಇಲ್ಲ, ಮುಮೆಂಟೋ ಇಲ್ಲ ಎಂದು ಫೋನ್ ಬರುತ್ತೆ. ಆಗ ನಮ್ಮ ಮುಖಂಡರ ಮನೆಯಲ್ಲಿದ್ದ ಮುಮೆಂಟೋ, ಶಾಲು, ಹಾರ ತರಿಸಿಕೊಂಡು ಕಾರ್ಯಕ್ರಮ ಮಾಡುತ್ತೇವೆ” ಎಂದು ರಾಘವೇಂದ್ರ ಹೇಳಿದರು.

ಇದನ್ನು ಓದಿ:  ನದಿಗೆ ತಳ್ಳಲ್ಪಟ್ಟರೂ ಬದುಕುಳಿದ ಪತಿ; ಪತ್ನಿಗೆ ವಿಚ್ಛೇದನ ನೀಡಲು ನಿರ್ಧಾರ! ಏನಿದು ವೈರಲ್ ಸುದ್ದಿ??🟢🟣

ಒಟ್ಟಾರೆ, ಬಹುನಿರೀಕ್ಷಿತ ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭವು ಅಭಿವೃದ್ಧಿ ಕಾರ್ಯದ ಸಂಭ್ರಮಕ್ಕಿಂತ ಹೆಚ್ಚಾಗಿ ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಸಾಕ್ಷಿಯಾಗಿದೆ.

ಹೆಚ್ಚಿನ ಮಾಹಿತಿ ಹಾಗೂ ಕ್ಷಣ ಕ್ಷಣದ ಶಿವಮೊಗ್ಗ ಸುದ್ದಿಗಳಿಗಾಗಿ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ವೀಕ್ಷಿಸುತ್ತಿರಿ.

ಇದನ್ನು ಓದಿ: ಶರಾವತಿ ಮುಕುಟಕ್ಕೆ ಹೊಸ ಸೇತುವೆ ಸೊಬಗು: ಸಿಗಂಧೂರು ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಆರು ದಶಕಗಳ ಹೋರಾಟಕ್ಕೆ ಮುಕ್ತಿ!

ಜಾಹಿರಾತು:

 

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.