ಶಿವಮೊಗ್ಗ: ಜಿಲ್ಲೆಯ ಕೋಟೆಗಂಗೂರಿನ ಅಜ್ಜಪ್ಪಸ್ವಾಮಿ ದೇವಾಲಯದಲ್ಲಿ ಕಳ್ಳತನ ನಡೆದಿದೆ. ಜುಲೈ 12ರ ರಾತ್ರಿ ದೇವಾಲಯದ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಹುಂಡಿಯನ್ನು ಒಡೆದು ಸುಮಾರು ₹60,000 ಕಾಣಿಕೆ ಹಣವನ್ನು ಕದ್ದೊಯ್ದಿದ್ದಾರೆ. ಈ ಕೃತ್ಯದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??
ಜುಲೈ 12ರ ರಾತ್ರಿ 7 ಗಂಟೆಗೆ ಅರ್ಚಕ ಬಸವರಾಜಪ್ಪ ಅವರು ಪೂಜೆ ಮುಗಿಸಿ ದೇವಾಲಯಕ್ಕೆ ಬೀಗ ಹಾಕಿ ಹೋಗಿದ್ದರು. ಮರುದಿನ, ಅಂದರೆ ಜುಲೈ 13ರಂದು ಬೆಳಗ್ಗೆ ದೇವಾಲಯದ ಸ್ವಚ್ಛತಾ ಕಾರ್ಯಕ್ಕೆ ಬಂದ ಜಯಣ್ಣ ಎಂಬುವವರು ಕಳ್ಳತನವಾಗಿರುವುದನ್ನು ಪತ್ತೆ ಹಚ್ಚಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದನ್ನು ಓದಿ: ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!
ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಸಿಸಿಟಿವಿ ದೃಶ್ಯದಲ್ಲಿ ಕಳ್ಳರ ಕೃತ್ಯ:
ದೇವಾಲಯದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಳ್ಳತನದ ಸ್ಪಷ್ಟ ಚಿತ್ರಣ ಲಭ್ಯವಾಗಿದೆ. ರೇನ್ ಕೋಟ್ ಧರಿಸಿದ ಮೂವರು ಕಳ್ಳರು ದೇವಾಲಯದೊಳಗೆ ನುಗ್ಗಿ ಹುಂಡಿಯನ್ನು ಒಡೆಯುವ ದೃಶ್ಯ ಸೆರೆಯಾಗಿದೆ. ಹಣವನ್ನು ಟವಲ್‌ನಲ್ಲಿ ಕಟ್ಟಿಕೊಂಡು ಕಳ್ಳರು ಪರಾರಿಯಾಗಿದ್ದಾರೆ.
ಇದನ್ನು ಓದಿ: ದೇಶಕ್ಕೆ ಮತ್ತೆ ತುರ್ತು ಪರಿಸ್ಥಿತಿ ಬರುವುದಿಲ್ಲ: ಬಿ.ಎಲ್.ಸಂತೋಷ್ ಭರವಸೆ
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಈ ಕೃತ್ಯಕ್ಕೆ ಸಂಬಂಧಿಸಿದಂತೆ ದೇವಾಲಯದ ಸಹ ಕಾರ್ಯದರ್ಶಿ ಜಗದೀಶ್ ಅವರು ದೂರು ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನು ಓದಿ: ಸೊರಬದ ‘ಪ್ರಕೃತಿ ಮೆಡಿಕಲ್ಸ್’ ಮಾಲೀಕ ಹರೀಶ್ ಭಟ್ ವಿರುದ್ಧ ಜಾತಿ ನಿಂದನೆ ಕೇಸ್: ಅರೆಸ್ಟ್, ಜೈಲುಪಾಲು!
ಇದನ್ನು ಓದಿ: ಶರಾವತಿ ಮುಕುಟಕ್ಕೆ ಹೊಸ ಸೇತುವೆ ಸೊಬಗು: ಸಿಗಂಧೂರು ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಆರು ದಶಕಗಳ ಹೋರಾಟಕ್ಕೆ ಮುಕ್ತಿ!
ಹೆಚ್ಚಿನ ಮಾಹಿತಿ ಹಾಗೂ ಕ್ಷಣ ಕ್ಷಣದ ಶಿವಮೊಗ್ಗ ಸುದ್ದಿಗಳಿಗಾಗಿ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ವೀಕ್ಷಿಸುತ್ತಿರಿ.
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply