ಡಾ. ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ: ನಿರ್ದೇಶಕ ಅನಿರುದ್ಧ ಜತ್ಕರ್‌ ಮನವಿ!

ಬೆಂಗಳೂರು: ಕನ್ನಡ ಚಿತ್ರರಂಗದ ಅಪ್ರತಿಮ ನಾಯಕ ನಟ, 225ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುವ ದಿ. ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ನಿರ್ದೇಶಕ ಅನಿರುದ್ಧ ಜತ್ಕರ್ ಮನವಿ ಮಾಡಿದ್ದಾರೆ.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅನಿರುದ್ಧ ಜತ್ಕರ್, ವಿಷ್ಣುವರ್ಧನ್ ಅವರು ಭೌತಿಕವಾಗಿ ನಮ್ಮನ್ನು ಅಗಲಿ 15 ವರ್ಷಗಳೇ ಕಳೆದರೂ ಜನರ ಹೃದಯದಲ್ಲಿ ಅವರ ಸ್ಥಾನ ಅಚಲವಾಗಿದೆ ಎಂದಿದ್ದಾರೆ. ಇದುವರೆಗೂ ಅವರಿಗೆ ಕೇಂದ್ರ ಸರ್ಕಾರದಿಂದ ಪದ್ಮಶ್ರೀ ಪ್ರಶಸ್ತಿ ಕೂಡ ದೊರಕಿಲ್ಲದಿರುವುದು ಮತ್ತು ರಾಜ್ಯದ ಅತ್ಯುನ್ನತ ಗೌರವವಾದ ಕರ್ನಾಟಕ ರತ್ನ ಪ್ರಶಸ್ತಿ ಮರಣೋತ್ತರವಾಗಿಯೂ ಲಭಿಸದಿರುವುದು ಬೇಸರದ ಸಂಗತಿ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿ: ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!

ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

ಜಾಹಿರಾತು:

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಮುಂದಿನ ಸೆಪ್ಟೆಂಬರ್ 18 ರಂದು ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮವಾರ್ಷಿಕೋತ್ಸವವಿದೆ. ಈ ವಿಶೇಷ ಸಂದರ್ಭದಲ್ಲಿ ಅವರ ಅಪಾರ ಸಾಧನೆಗಳನ್ನು ಗೌರವಿಸಿ, ಕೋಟ್ಯಂತರ ಅಭಿಮಾನಿಗಳು ಮತ್ತು ಹಿತೈಷಿಗಳ ಇಚ್ಛೆಯನ್ನು ಈಡೇರಿಸುವಂತೆ, ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಅನಿರುದ್ಧ ಜತ್ಕರ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಇದನ್ನು ಓದಿ: ದೇಶಕ್ಕೆ ಮತ್ತೆ ತುರ್ತು ಪರಿಸ್ಥಿತಿ ಬರುವುದಿಲ್ಲ: ಬಿ.ಎಲ್.ಸಂತೋಷ್ ಭರವಸೆ

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಇದನ್ನು ಓದಿ: ಸೊರಬದ ‘ಪ್ರಕೃತಿ ಮೆಡಿಕಲ್ಸ್’ ಮಾಲೀಕ ಹರೀಶ್ ಭಟ್‌ ವಿರುದ್ಧ ಜಾತಿ ನಿಂದನೆ ಕೇಸ್: ಅರೆಸ್ಟ್, ಜೈಲುಪಾಲು!

ಇದನ್ನು ಓದಿ: ಶರಾವತಿ ಮುಕುಟಕ್ಕೆ ಹೊಸ ಸೇತುವೆ ಸೊಬಗು: ಸಿಗಂಧೂರು ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಆರು ದಶಕಗಳ ಹೋರಾಟಕ್ಕೆ ಮುಕ್ತಿ!

ಹೆಚ್ಚಿನ ಮಾಹಿತಿ ಹಾಗೂ ಕ್ಷಣ ಕ್ಷಣದ ಶಿವಮೊಗ್ಗ ಸುದ್ದಿಗಳಿಗಾಗಿ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ವೀಕ್ಷಿಸುತ್ತಿರಿ.

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.