“ಸುಮಾರು 14 ಕೋಟಿ ವೆಚ್ಚದಲ್ಲಿ ತಂದೆ-ತಾಯಿ ಹೆಸರಲ್ಲಿ ಸರ್ಕಾರಿ ಶಾಲೆಗೆ ಹೈಟೆಕ್ ಸ್ಪರ್ಶ: ಹೊಂಗನೂರಿನಲ್ಲಿ ಮಾದರಿ ಕಾರ್ಯ”

ರಾಜ್ಯ : ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರಿನಲ್ಲಿ ಕಣ್ವ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿಯಾದ ಶ್ರೀ ಡಾ. ಹೆಚ್.ಎಂ ವೆಂಕಟಪ್ಪ ಅವರು ಸುಮಾರು 14 ಕೋಟಿ ರೂಪಾಯಿಗಳ ವೆಚ್ಚದಲ್ಲಿ ತಮ್ಮ ತಂದೆ-ತಾಯಿ ಹೆಸರಲ್ಲಿ “ಶ್ರೀಮತಿ ಚೆನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಶಾಲೆ” ಯ ನೂತನ ಕಟ್ಟಡವನ್ನು ಅಭಿವೃದ್ಧಿಪಡಿಸಿದ್ದಾರೆ.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ಈ ಭವ್ಯ ಉದ್ಘಾಟನಾ ಸಮಾರಂಭದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು ಭಾಗವಹಿಸಿ, ಪರಮಪೂಜ್ಯ ಶ್ರೀಗಳಾದ ಶ್ರೀಶ್ರೀಶ್ರೀ ನಿರ್ಮಲಾನಂದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ, ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರೊಂದಿಗೆ ಜ್ಯೋತಿ ಬೆಳಗಿಸುವ ಮೂಲಕ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

ಜಾಹಿರಾತು:

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರಾದ ಮಧು ಬಂಗಾರಪ್ಪನವರು, “ಸನ್ಮಾನ್ಯ ಡಾ. ಹೆಚ್.ಎಂ ವೆಂಕಟಪ್ಪ ಅವರ ನಿಸ್ವಾರ್ಥ ಸೇವೆ ಹಾಗೂ ದೂರದೃಷ್ಟಿ ಕಲ್ಪನೆ ಇಂದು ನಮಗೆಲ್ಲ ಮಾದರಿಯಾಗಿದೆ. ತಮ್ಮ ಗ್ರಾಮದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ವಿದ್ಯಾವಂತರಾಗಿ ತಮ್ಮ ಬದುಕನ್ನ ರೂಪಿಸಿಕೊಳ್ಳಬೇಕೆಂಬ ಸದುದ್ದೇಶದಿಂದ 14 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಹೊಂಗನೂರು ಗ್ರಾಮದ ಶಾಲೆಗೆ ಹೊಸರೂಪ ಕಲ್ಪಿಸಿದ್ದಾರೆ. ಅವರ ಈ ಕಾರ್ಯಕ್ಕೆ ಹೃದಯಪೂರ್ವಕ ಅಭಿನಂದನೆಗಳು. ಹೃದಯ ಶ್ರೀಮಂತರಾದ ಡಾ. ಹೆಚ್.ಎಂ ವೆಂಕಟಪ್ಪ ಅವರಿಗೆ ಇನ್ನಷ್ಟು ಸಮಾಜಮುಖಿ ಕೆಲಸ ಮಾಡಲು ಭಗವಂತ ಆಯುರಾರೋಗ್ಯ ನೀಡಲಿ” ಎಂದು ಶುಭಹಾರೈಸಿದರು.

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ನಂತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಈ ಕಟ್ಟಡಕ್ಕೆ ಸಹಕರಿಸಿದವರಿಗೆ ಸನ್ಮಾನಿಸಿ, ಗೌರವಿಸಿ ಅಭಿನಂದಿಸಲಾಯಿತು.

ಇದನ್ನು ಓದಿ: ಡಾ. ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ: ನಿರ್ದೇಶಕ ಅನಿರುದ್ಧ ಜತ್ಕರ್‌ ಮನವಿ!

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸಭಾಪತಿಗಳಾದ ಶ್ರೀ ಬಸವರಾಜ ಹೊರಟ್ಟಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿ.ಪಿ ಯೋಗೇಶ್ವರ್, ವಿಧಾನಪರಿಷತ್ ಸದಸ್ಯರಾದ ಶ್ರೀ ಎಸ್. ರವಿ, ಶ್ರೀ ಪುಟ್ಟಣ್ಣ, ಸಂಸದರಾದ ಶ್ರೀ ಸಿ.ಎನ್ ಮಂಜುನಾಥ್ ಸೇರಿದಂತೆ ಅನೇಕ ಗಣ್ಯರು, ಮುಖಂಡರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಕಣ್ವ ಫೌಂಡೇಶನ್‌ನ ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಹಾಜರಿದ್ದರು.

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.