ಅಧ್ಯಯನದಲ್ಲಿ ಆಸಕ್ತಿ ವಹಿಸುವುದು ಮುಖ್ಯ: ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷೆ ಲತಾ ರಮೇಶ್ ಕರೆ

ಶಿವಮೊಗ್ಗ: ಮಕ್ಕಳು ಹೆಚ್ಚಿನ ಆಸಕ್ತಿಯಿಂದ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಇನ್ನರ್‌ವ್ಹೀಲ್ ಕ್ಲಬ್ ಆಫ್ ಶಿವಮೊಗ್ಗದ ಅಧ್ಯಕ್ಷೆ ಲತಾ ರಮೇಶ್ ಹೇಳಿದರು.

ನಗರದ ಬೊಮ್ಮನಕಟ್ಟೆ ಬಡಾವಣೆಯಲ್ಲಿರುವ ಮಹಾರಾಣಿ ಪ್ರೌಢಶಾಲೆಯಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿರಂತರ ಪರಿಶ್ರಮ ವಹಿಸಿ ಅಧ್ಯಯನ ಮಾಡುವುದರಿಂದ ಉನ್ನತ ಸಾಧನೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ಇನ್ನರ್‌ವ್ಹೀಲ್ ಕ್ಲಬ್ ಆಫ್ ಶಿವಮೊಗ್ಗ ಸಂಸ್ಥೆಯು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ವಿವಿಧ ಸೇವಾ ಕಾರ್ಯಗಳನ್ನು ನಡೆಸುತ್ತಿದೆ. ಮಕ್ಕಳ ಶಿಕ್ಷಣಕ್ಕೆ ಪೂರಕವಾದ ಚಟುವಟಿಕೆಗಳನ್ನು ಆಯೋಜಿಸಿ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಲತಾ ರಮೇಶ್ ಹೇಳಿದರು. ಸಮಾಜಮುಖಿ ಹಾಗೂ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವುದಲ್ಲದೆ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

ಜಾಹಿರಾತು:

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಕಾರ್ಯಕ್ರಮದಲ್ಲಿ  ಶ್ರೀರಂಜಿನಿ ದತ್ತಾತ್ರಿ ನೇತೃತ್ವದಲ್ಲಿ ಮಕ್ಕಳು ಮತ್ತು ಸರಳ ಸಾಮಾಜಿಕ ಜವಾಬ್ದಾರಿ ಕುರಿತು ಪಿಕ್ ಅಂಡ್ ಸ್ಪೀಚ್ ಹಾಗೂ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು, ಜನಸಂಖ್ಯೆ ಹಾಗೂ ಸಾಮಾಜಿಕ ಜವಾಬ್ದಾರಿಯ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಂಡರು.

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಇದೇ ಸಂದರ್ಭದಲ್ಲಿ ಇನ್ನರ್‌ವ್ಹೀಲ್ ಕ್ಲಬ್ ಆಫ್ ಶಿವಮೊಗ್ಗ ಕಾರ್ಯದರ್ಶಿ ಶೃತಿ ರಾಕೇಶ್ ಮಾತನಾಡಿದರು. ಯಶೋಧ ಗೌಳೆರ್ ಮಕ್ಕಳಿಗೆ ಹಲವು ಉಪಯುಕ್ತ ಮಾಹಿತಿಗಳನ್ನು ನೀಡಿದರು. ಇನ್ನರ್‌ವ್ಹೀಲ್ ಕ್ಲಬ್ ಆಫ್ ಶಿವಮೊಗ್ಗ ಅಧ್ಯಕ್ಷೆ ಲತಾ ಎಂ ರಮೇಶ್ ಅವರು ಶಿಕ್ಷಕರಿಗೆ ಗುರುಪೂರ್ಣಿಮೆ ಪ್ರಯುಕ್ತ ಕಿರುಕಾಣಿಕೆಗಳನ್ನು ನೀಡಿ ಗೌರವಿಸಿದರು.

ಇದನ್ನು ಓದಿ: ಡಾ. ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ: ನಿರ್ದೇಶಕ ಅನಿರುದ್ಧ ಜತ್ಕರ್‌ ಮನವಿ!

ಹೆಚ್ಚಿನ ಮಾಹಿತಿ ಹಾಗೂ ಕ್ಷಣ ಕ್ಷಣದ ಶಿವಮೊಗ್ಗ ಸುದ್ದಿಗಳಿಗಾಗಿ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ವೀಕ್ಷಿಸುತ್ತಿರಿ.

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.