ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನದ ದಿನಾಂಕಗಳು ನಿಗದಿಯಾಗಿವೆ. ಆಗಸ್ಟ್ 11, 2025 ಸೋಮವಾರದಿಂದ ಅಧಿವೇಶನ ಆರಂಭಗೊಂಡು, ಆಗಸ್ಟ್ 22, 2025ರವರೆಗೆ ನಡೆಯಲಿದೆ.
ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??
ಈ ಕುರಿತು ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ. ಶ್ರೀಧರ್ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಭಾರತ ಸಂವಿಧಾನದ 174ನೇ ಅನುಚ್ಛೇದದ (1)ನೇ ಖಂಡದ ಮೂಲಕ ತಮಗೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು 2025ರ ಆಗಸ್ಟ್ 11ರ ಸೋಮವಾರ ಪೂರ್ವಾಹ್ನ 11 ಗಂಟೆಗೆ ಬೆಂಗಳೂರಿನಲ್ಲಿ ಕರ್ನಾಟಕ ವಿಧಾನಮಂಡಲದ ಅಧಿವೇಶನ ಸಮಾವೇಶಗೊಳಿಸಲು ಕರೆ ನೀಡಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ವಿಧಾನಮಂಡಲದ ಅಧಿವೇಶನದ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದ್ದು, ದಿನಾಂಕ 11-08-2025ರ ಸೋಮವಾರದಂದು ಸರ್ಕಾರಿ ಕಾರ್ಯಕಲಾಪಗಳು ನಡೆಯಲಿವೆ ಎಂದು ಸ್ಪಷ್ಟಪಡಿಸಲಾಗಿದೆ. ಆಗಸ್ಟ್ 11 ರಿಂದ ಪ್ರಾರಂಭವಾಗಿ ಆಗಸ್ಟ್ 22, 2025ರವರೆಗೆ ಒಟ್ಟು 12 ದಿನಗಳ ಕಾಲ ವಿಧಾನಮಂಡಲದ ಕಲಾಪಗಳು ನಡೆಯಲಿವೆ.
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಇದನ್ನು ಓದಿ: ಡಾ. ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ: ನಿರ್ದೇಶಕ ಅನಿರುದ್ಧ ಜತ್ಕರ್ ಮನವಿ!
ಈ ಅಧಿವೇಶನದಲ್ಲಿ ರಾಜ್ಯದ ಪ್ರಮುಖ ವಿಷಯಗಳು, ಸರ್ಕಾರದ ಯೋಜನೆಗಳು ಮತ್ತು ಸಾರ್ವಜನಿಕ ಹಿತಾಸಕ್ತಿಯ ವಿಷಯಗಳ ಕುರಿತು ಚರ್ಚೆಗಳು ನಡೆಯುವ ನಿರೀಕ್ಷೆಯಿದೆ.
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply