ಶಿವಮೊಗ್ಗ: ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ (Additional SP) ಆಗಿ ಸೇವೆ ಸಲ್ಲಿಸುತ್ತಿದ್ದ ಅನಿಲ್ ಕುಮಾರ್ ಭೂಮರೆಡ್ಡಿ ಅವರನ್ನು ವರ್ಗಾಯಿಸಿ ಒಳಾಡಳಿತ ಇಲಾಖೆ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ಅವರನ್ನು ನೇಮಕ ಮಾಡಲಾಗಿದೆ.
ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??
ಅನಿಲ್ ಕುಮಾರ್ ಭೂಮರೆಡ್ಡಿ ಅವರ ವರ್ಗಾವಣೆಯಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ತೆರವಾಗಿರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸ್ಥಾನಕ್ಕೆ ಸರ್ಕಾರ ಸದ್ಯಕ್ಕೆ ಯಾರನ್ನೂ ನೇಮಕ ಮಾಡಿಲ್ಲ. ಪ್ರಸ್ತುತ ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗಳಿದ್ದು, ಇದೀಗ ಒಂದು ಸ್ಥಾನ ಖಾಲಿಯಾಗಿದೆ.
ಇದನ್ನು ಓದಿ : ಸಿಗಂದೂರು ಲಾಂಚ್ಗಳು ಇನ್ನು ಬೋಟ್ ಹೋಟೆಲ್ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಅನಿಲ್ ಕುಮಾರ್ ಭೂಮರೆಡ್ಡಿ ಅವರ ಹಿನ್ನೆಲೆ:
ಅನಿಲ್ ಕುಮಾರ್ ಭೂಮರೆಡ್ಡಿ ಅವರು 1994ರಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದರು. ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಪಿಎಸ್ಐ, ಇನ್ಸ್ಪೆಕ್ಟರ್ ಹಾಗೂ ಡಿವೈಎಸ್ಪಿ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. 2023ರ ಜನವರಿಯಲ್ಲಿ ಅವರು ಶಿವಮೊಗ್ಗದ ಹೆಚ್ಚುವರಿ ರಕ್ಷಣಾಧಿಕಾರಿಯಾಗಿ ನೇಮಕಗೊಂಡಿದ್ದರು. ಪೊಲೀಸ್ ಇಲಾಖೆಯಲ್ಲಿ 30 ವರ್ಷಗಳ ದೀರ್ಘ ಸೇವೆ ಸಲ್ಲಿಸಿರುವ ಇವರ ಕಾರ್ಯವನ್ನು ಗುರುತಿಸಿ, 2024ರಲ್ಲಿ ಅವರಿಗೆ ರಾಷ್ಟ್ರಪತಿ ಪದಕ ನೀಡಿ ಗೌರವಿಸಲಾಗಿತ್ತು.
ಇದನ್ನು ಓದಿ: ಕ್ರೆಡಿಟ್ ಕಾರ್ಡ್ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಇದನ್ನು ಓದಿ: ಡಾ. ವಿಷ್ಣುವರ್ಧನ್ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ: ನಿರ್ದೇಶಕ ಅನಿರುದ್ಧ ಜತ್ಕರ್ ಮನವಿ!
ಶಿವಮೊಗ್ಗ ಜಿಲ್ಲೆಯಲ್ಲಿ ತಮ್ಮ ದಕ್ಷ ಸೇವೆಯಿಂದ ಗುರುತಿಸಿಕೊಂಡಿದ್ದ ಅನಿಲ್ ಕುಮಾರ್ ಭೂಮರೆಡ್ಡಿ ಅವರಿಗೆ ಮುಂದಿನ ಕಾರ್ಯಕ್ಕೆ ಶುಭ ಹಾರೈಕೆಗಳು.
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply