ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…

ಶಿವಮೊಗ್ಗ:ಜಿಲ್ಲೆಯ ಸಾಗರ ತಾಲ್ಲೂಕಿನ ಜನತೆಗೆ ಇದು ನಿಜಕ್ಕೂ ಸಿಹಿ ಸುದ್ದಿ! 2025-26ನೇ ಸಾಲಿನಿಂದ ಸಾಗರ ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ವಿಶೇಷ ಪ್ರಯತ್ನದ ಫಲವಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ಕುರಿತು ಆದೇಶ ಹೊರಡಿಸಿದ್ದು, ರಾಜ್ಯದ 4134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಯಿಂದ ಪ್ರಸ್ತುತ ನಡೆಯುತ್ತಿರುವ ಕನ್ನಡ ಮತ್ತು ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ದ್ವಿಭಾಷಾ ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಅನುಮತಿ ನೀಡಿದೆ.

ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

ಜಾಹಿರಾತು:

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಶಿವಮೊಗ್ಗ ಜಿಲ್ಲೆಯ ಇತರ ತಾಲ್ಲೂಕುಗಳಿಗೂ ವಿಸ್ತರಣೆ:

ಸಾಗರ ತಾಲ್ಲೂಕಿನ ಜೊತೆಗೆ, ತೀರ್ಥಹಳ್ಳಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆ, ಬಿಳಲುಕೊಪ್ಪ, ಸರ್ಕಾರಿ ಪ್ರೌಢಶಾಲೆ, ಹೊಸೂರು-ಗುಡ್ಡೇರಿ ಮತ್ತು ಸರ್ಕಾರಿ ಪ್ರೌಢ ಶಾಲೆ, ಹೆದ್ದೂರುಗಳಲ್ಲೂ ಕನ್ನಡ, ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮದ ದ್ವಿಭಾಷಾ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ.

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಸಾಗರ ತಾಲ್ಲೂಕಿನಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭವಾಗಲಿರುವ ಶಾಲೆಗಳು ಯಾವುವು?

  •  ನಾಗವಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ
  • ಬರದವಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ
  • ಮಾಸೂರಿನ GHS ಶಾಲೆ
  • ಮಾಲ್ವೆಯ GHPS ಶಾಲೆ
  • ಬಿಳಿಸಿರಿ GHPS ಶಾಲೆ
  • ಹೆಬ್ಬರಿಗೆ GHPS ಶಾಲೆ
  • ನರಸೀಪುರ GLPS ಶಾಲೆ
  • ಆನಂದಪುರಂ GLPS ಶಾಲೆ
  • ಯಡೆಹಳ್ಳಿ GHPS ಶಾಲೆ
  • ಗೆಣಸಿನಕುಣಿ GHPS ಶಾಲೆ
  • ರಾಮನಗರ-ಯಳಗಳಲೆ GHPS ಶಾಲೆ
  • ಟ್ಯಾಂಕ್ ಸಾಗರ್ GHPS ಶಾಲೆ
  • ಸಣ್ಣಮನೆ ಎಕ್ಸ್ ಟೇನ್ಷನ್ ಸಾಗರ GHPS ಶಾಲೆ
  • GGHPS ಉರ್ದು ಗಾಂಧಿನಗರ ಶಾಲೆ
  • GGHPS ಉರ್ದು ಅರಳಿಕಟ್ಟೆ ಸಾಗರ
  • ಸರ್ಕಾರಿ ಶ್ರೀ ಸಿದ್ದೇಶ್ವರ HPS ಸಾಗರ ಶಾಲೆ

ಇದನ್ನು ಓದಿ: ಡಾ. ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ: ನಿರ್ದೇಶಕ ಅನಿರುದ್ಧ ಜತ್ಕರ್‌ ಮನವಿ!

ಒಟ್ಟಾರೆಯಾಗಿ, 2025-26ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಪ್ರಸ್ತುತ ಇರುವ ಕನ್ನಡ ಮತ್ತು ಇತರೆ ಮಾಧ್ಯಮದ ಜೊತೆಗೆ ಸಾಗರ ತಾಲ್ಲೂಕಿನ 16 ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ದ್ವಿಭಾಷಾ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ಸಿಕ್ಕಿದೆ. ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮದಲ್ಲಿ ಓದಿಸಬೇಕು ಎನ್ನುವ ಪೋಷಕರಿಗೆ ಇದು ನಿಜಕ್ಕೂ ಸಂತಸದ ಸುದ್ದಿಯಾಗಿದೆ.

ಇದನ್ನು ಓದಿ: ಧರ್ಮಸ್ಥಳ ಅನುಮಾನಾಸ್ಪದ ಸಾವು ಪ್ರಕರಣ: ಕೊನೆಗೂ SIT ರಚಿಸಿದ ರಾಜ್ಯ ಸರ್ಕಾರ! ಆದೇಶದ ಪ್ರತಿ ಇಲ್ಲಿದೆ ನೋಡಿ!!

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.