ಶಿವಮೊಗ್ಗ: ತೀರ್ಥಹಳ್ಳಿ ಕರ್ತವ್ಯ ಲೋಪ ಮತ್ತು ಅಧಿಕಾರ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ, ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಇಂದು (ಜುಲೈ 21, 2025) ಬೃಹತ್ ಪ್ರತಿಭಟನೆ ಮತ್ತು ಧರಣಿ ನಡೆಸಲಾಯಿತು.
ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ವಕ್ತಾರ ಆದರ್ಶ ಹುಂಚದಕಟ್ಟೆ, “ಶಾಸಕ ಆರಗ ಜ್ಞಾನೇಂದ್ರ ಅವರ ನಡುವಳಿಕೆಯಿಂದ ಸರ್ಕಾರಿ ಅಧಿಕಾರಿಗಳು ದಾರಿತಪ್ಪುತ್ತಿದ್ದಾರೆ. ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ನಾನೇ ತಂದ ಕಾರ್ಯಕ್ರಮಗಳೆಂದು ಸುಳ್ಳು ಹೇಳುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಸಕರ ಮಾತು ಕೇಳಿ ಬಿಜೆಪಿ ಏಜೆಂಟರಂತೆ ವರ್ತಿಸಿದ್ದಾರೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ : ಸಿಗಂದೂರು ಲಾಂಚ್ಗಳು ಇನ್ನು ಬೋಟ್ ಹೋಟೆಲ್ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಇದನ್ನು ಓದಿ: ಕ್ರೆಡಿಟ್ ಕಾರ್ಡ್ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಜಿಲ್ಲಾ ಕಾಂಗ್ರೆಸ್ ಮುಖಂಡ ಡಿ.ಎಸ್. ವಿಶ್ವನಾಥ್ ಶೆಟ್ಟಿ ಮಾತನಾಡಿ, “ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್ ತನ್ನೊಬ್ಬನ ಸಾಧನೆ ಎನ್ನುವಂತೆ ಬಿಂಬಿಸಲು ಹೊರಟಿದ್ದು, ಸಚಿವರು ಸರ್ಕಾರದ ಪಾಲುದಾರಿಕೆ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ. ಮೊನ್ನೆ ನಡೆದ ಶಾಲಾ ಮಕ್ಕಳಿಗೆ ಬ್ಯಾಗ್, ಸ್ವಟರ್ ವಿತರಣಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಲು ಜ್ಞಾನೇಂದ್ರ ಅವರ ಕುಮ್ಮಕ್ಕು ಕಾರಣ. ಶಾಸಕರು ಹಾಗೂ ಅವರ ಪಿ.ಎ. ಬಸವರಾಜ್ ಸರ್ಕಾರಿ ಅಧಿಕಾರಿಗಳನ್ನು ದಾರಿ ತಪ್ಪಿಸುವ ಕಾರ್ಯದಲ್ಲಿ ತೊಡಗಿದ್ದಾರೆ” ಎಂದು ಆರೋಪಿಸಿದರು.
ಇದನ್ನು ಓದಿ: ಡಾ. ವಿಷ್ಣುವರ್ಧನ್ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ: ನಿರ್ದೇಶಕ ಅನಿರುದ್ಧ ಜತ್ಕರ್ ಮನವಿ!
ಮುಖಂಡ ಬಿ.ಆರ್. ರಾಘವೇಂದ್ರ ಶೆಟ್ಟಿ ಮಾತನಾಡಿ, “ತಾಲ್ಲೂಕಿನಲ್ಲಿ ನಡೆಯುವ ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಉಸ್ತುವಾರಿ ಸಚಿವರ ಗಮನಕ್ಕೆ ಅಥವಾ ಸರ್ಕಾರದ ಪ್ರತಿನಿಧಿಗಳಿಗೆ, ಆಡಳಿತ ಪಕ್ಷವಾದ ಕಾಂಗ್ರೆಸ್ನ ಪ್ರಮುಖರಿಗೆ ಗಮನಕ್ಕೆ ತಾರದೇ, ಬಿಇಓ ಒಂದು ಪಕ್ಷದ ಪರವಾಗಿ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ತಾಲ್ಲೂಕಿನ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಶಿಕ್ಷಕರನ್ನು ಹಾದಿತಪ್ಪಿಸಿ, ಸರ್ಕಾರದ ಕಾರ್ಯಕ್ರಮವನ್ನು ಮರೆಮಾಚಿ, ಬಿಜೆಪಿ ಮುಖಂಡರ ಅಣತಿಯಂತೆ ಕರ್ತವ್ಯ ನಿರ್ವಹಿಸಿರುವ ಬಿಇಓ ಗಣೇಶ್ ಅವರನ್ನು ತಕ್ಷಣ ಅಮಾನತು ಪಡಿಸಬೇಕು” ಎಂದು ಒತ್ತಾಯಿಸಿದರು.
ಇದನ್ನು ಓದಿ: ಧರ್ಮಸ್ಥಳ ಅನುಮಾನಾಸ್ಪದ ಸಾವು ಪ್ರಕರಣ: ಕೊನೆಗೂ SIT ರಚಿಸಿದ ರಾಜ್ಯ ಸರ್ಕಾರ! ಆದೇಶದ ಪ್ರತಿ ಇಲ್ಲಿದೆ ನೋಡಿ!!
ನಂತರ ಪ್ರತಿಭಟನಾ ಸ್ಥಳಕ್ಕೆ ಶಿವಮೊಗ್ಗದಿಂದ ಆಗಮಿಸಿದ ಡಿಡಿಪಿಐ ಮಂಜುನಾಥ್ ಅವರು,
- “ಈ ಪ್ರಕರಣವನ್ನು ಇಲಾಖೆ ಗಂಭೀರವಾಗಿ ತೆಗೆದುಕೊಂಡಿದೆ. ಬಿಇಓ ಅವರಿಗೆ ಒಂದು ವಾರಗಳ ಕಾಲ ರಜೆ ನೀಡಿ ತನಿಖೆಗೆ ಆದೇಶಿಸುತ್ತೇನೆ. ತನಿಖೆಯ ನಂತರ ಅವರ ಮೇಲೆ ಕ್ರಮ ಕೈಗೊಳ್ಳುವುದಾಗಿ” ಭರವಸೆ ನೀಡಿದರು.
ಈ ಪ್ರತಿಭಟನೆಯಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆಸ್ತೂರು ಮಂಜುನಾಥ್, ಮುಡುಬಾ ರಾಘವೇಂದ್ರ, ಗ್ಯಾರಂಟಿ ಸಮಿತಿ ಅಧ್ಯಕ್ಷ ಶಚೀಂದ್ರ ಹೆಗಡೆ, ಡಾ. ಸುಂದರೇಶ್, ಯುವ ಕಾಂಗ್ರೆಸ್ ಮುಖಂಡರಾದ ಪೂರ್ಣೇಶ್ ಕೆಳಕೆರೆ, ಶ್ರೇಯಸ್ ರಾವ್, ಅಮರನಾಥ ಶೆಟ್ಟಿ, ಜಯಕರ ಶೆಟ್ಟಿ, ಅಶ್ವಲ್, ಪ.ಪಂ. ಸದಸ್ಯರಾದ ಗೀತಾ ರಮೇಶ್, ಶಬನಮ್, ಮಂಜುಳಾ ನಾಗೇಂದ್ರ, ಜೀನಾ ವಿಕ್ಟರ್ ಡಿಸೋಜಾ ಮುಂತಾದವರು ಉಪಸ್ಥಿತರಿದ್ದರು.
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply