ಶಿವಮೊಗ್ಗ: ಪಕ್ಷವನ್ನು ಸದೃಢವಾಗಿ ಕಟ್ಟುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಜುಲೈ 23ರಂದು (ನಾಳೆ) ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ 12 ಜಿಲ್ಲೆಗಳಲ್ಲಿ ಪ್ರವಾಸ ಪೂರ್ಣಗೊಳಿಸಿರುವ ಅವರು, ನಾಳೆ ಶಿವಮೊಗ್ಗದ 3 ವಿಧಾನಸಭಾ ಕ್ಷೇತ್ರಗಳಲ್ಲಿ ಭೇಟಿ ನೀಡಿ ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?
ಪ್ರವಾಸದ ವೇಳಾಪಟ್ಟಿ ಮತ್ತು ಸಮಾವೇಶಗಳು:
- ಬೆಳಗ್ಗೆ 10:30ಕ್ಕೆ: ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಲ್ಲಾಪುರ ಗ್ರಾಮದ ಗುಡ್ಡದ ಮಲ್ಲೇಶ್ವರ ಸಮುದಾಯ ಭವನದಲ್ಲಿ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಈ ಸಮಾವೇಶವನ್ನು ಶಾಸಕಿ ಶಾರದಾ ಪೂರ್ಯಾನಾಯ್ಕ ಅವರು ಮುನ್ನಡೆಸಲಿದ್ದಾರೆ.
- ಮಧ್ಯಾಹ್ನ 3:00ಕ್ಕೆ: ಶಿವಮೊಗ್ಗ ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿದೆ. ಪಕ್ಷದ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದೆ.
- ಸಂಜೆ 5:30ಕ್ಕೆ: ಭದ್ರಾವತಿಯ ಮಂಜುನಾಥ ಕಲ್ಯಾಣ ಮಂದಿರದಲ್ಲಿ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಪಕ್ಷದ ನಾಯಕಿ ಶಾರದಾ ಅಪ್ಪಾಜಿ ಅವರು ಇದರ ನೇತೃತ್ವ ವಹಿಸಲಿದ್ದಾರೆ.
ಈ ಎಲ್ಲಾ ಸಮಾವೇಶಗಳಲ್ಲಿ ಜೆಡಿಎಸ್ ಶಾಸಕರಾದ ಸಿ.ಎಸ್. ಸುರೇಶ್ ಬಾಬು, ಭೋಜೇಗೌಡ, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ ಸೇರಿದಂತೆ ರಾಜ್ಯ ಮಟ್ಟದ ಹಲವು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಚರ್ಚೆಯ ವಿಷಯಗಳು ಮತ್ತು ಪಕ್ಷ ಸಂಘಟನೆ:
ನಿಖಿಲ್ ಕುಮಾರಸ್ವಾಮಿ ಅವರು ಕಾರ್ಯಕರ್ತರೊಂದಿಗೆ ಪಕ್ಷದ ಸಂಘಟನೆ, ಸದಸ್ಯತ್ವ ನೋಂದಣಿ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಜೊತೆಗೆ, ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ನಾಗರಿಕರ ಸಮಸ್ಯೆಗಳು ಹಾಗೂ ಯಾವ ತಾಲೂಕಿನಲ್ಲಿ ಅಭಿವೃದ್ಧಿಯಾಗಬೇಕು ಎಂಬ ಬಗ್ಗೆಯೂ ಚರ್ಚೆ ನಡೆಸಿ, ಜನರ ಆಶೋತ್ತರಗಳಿಗೆ ಸ್ಪಂದಿಸುವ ಬಗ್ಗೆ ಗಮನಹರಿಸಲಿದ್ದಾರೆ ಎಂದು ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ತಿಳಿಸಿದರು.
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಈ ಸಮಾವೇಶಗಳಲ್ಲಿ ಪಕ್ಷದ ಜಿಲ್ಲಾ ಮುಖಂಡರು, ಯುವ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜೆಡಿಎಸ್ ವತಿಯಿಂದ ಮನವಿ ಮಾಡಲಾಗಿದೆ.
ಇದನ್ನು ಓದಿ: ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…
ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದವರು: ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್, ಶಿವಮೊಗ್ಗ ನಗರ ಜೆಡಿಎಸ್ ಘಟಕದ ಅಧ್ಯಕ್ಷ ದೀಪಕ್ ಸಿಂಗ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಪ್ರಮುಖರಾದ ಕೆ.ಎನ್. ರಾಮಕೃಷ್ಣ, ತ್ಯಾಗರಾಜ್, ನಾಗೇಶ್, ಹೆಚ್.ಎಂ. ಸಂಗಯ್ಯ, ಅಬ್ದುಲ್ ವಾಜಿದ್, ಸಂಜಯ್ ಕಶ್ಯಪ್, ರಾಕೇಶ್ ಡಿಸೋಜ, ನರಸಿಂಹ ಗಂಧದಮನೆ, ಜಯಣ್ಣ, ಲೋಹಿತ್, ಯೋಗೇಶ್ ಸೇರಿದಂತೆ ಹಲವರು ಹಾಜರಿದ್ದರು.
ಇದನ್ನು ಓದಿ: ಶಿವಮೊಗ್ಗ | ಮೈಸೂರು “ಕುವೆಂಪು ಎಕ್ಸ್‌ಪ್ರೆಸ್” ರೈಲಿನಲ್ಲಿ ಬೆಂಕಿ: ನಿಖರ ಕಾರಣವೇನು? ದೊಡ್ಡ ಅನಾಹುತ ತಪ್ಪಿದ್ದೇಗೆ?
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply