ಶಿವಮೊಗ್ಗ: ನಗರದ ಸಿದ್ದೇಶ್ವರ ನಗರದಲ್ಲಿ ಆತಂಕ ಸೃಷ್ಟಿಸಿದ್ದ ಘಟನೆಯಲ್ಲಿ, ಮನೆಯ ಹಾಲ್‌ನಲ್ಲಿದ್ದ ಸೋಫಾ ಕುರ್ಚಿಯ ಕೆಳಭಾಗದಲ್ಲಿ ಅವಿತುಕೊಂಡಿದ್ದ ಸುಮಾರು 1 ಅಡಿ ಉದ್ದದ ನಾಗರಹಾವಿನ ಮರಿಯನ್ನು ಉರಗ ಸಂರಕ್ಷಕ ಸ್ನೇಕ್ ಕಿರಣ್ ಅವರು ಯಶಸ್ವಿಯಾಗಿ ರಕ್ಷಿಸಿದ್ದಾರೆ.
ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?
ಜುಲೈ 22 ರಂದು ರವಿ ಕಿರಣ್ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ ಮನೆಯ ಸೋಫಾ ಕುರ್ಚಿಯ ಬಳಿ ಹಾವಿನ ಮರಿ ಕಾಣಿಸಿಕೊಂಡಿದ್ದನ್ನು ಗಮನಿಸಿದ ಕುಟುಂಬದವರು ತಕ್ಷಣವೇ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಸ್ಥಳಕ್ಕೆ ಧಾವಿಸಿದ ಸ್ನೇಕ್ ಕಿರಣ್, ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ, ಯಾವುದೇ ತೊಂದರೆಯಾಗದಂತೆ ಸುರಕ್ಷಿತವಾಗಿ ಹಾವಿನ ಮರಿಯನ್ನು ಹಿಡಿದು ರಕ್ಷಣೆ ಮಾಡಿದ್ದಾರೆ.
ಇದನ್ನು ಓದಿ: ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…
ಸ್ನೇಕ್ ಕಿರಣ್ ಮನವಿ:
“ಹಾವುಗಳು ಪರಿಸರದ ಅಪರೂಪದ ಜೀವಿಗಳು. ಅವು ನಿಮ್ಮ ಮನೆ ಅಥವಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಣಿಸಿಕೊಂಡರೆ ದಯವಿಟ್ಟು ಅವುಗಳಿಗೆ ತೊಂದರೆ ಕೊಡಬೇಡಿ. ತಕ್ಷಣವೇ ಹಾವಿನ ಸಂರಕ್ಷಕರಿಗೆ ಮಾಹಿತಿ ನೀಡಿ ಸುರಕ್ಷಿತವಾಗಿ ರಕ್ಷಿಸಲು ಸಹಕರಿಸಿ”
ಎಂದು ಉರಗ ಸಂರಕ್ಷಕ ಸ್ನೇಕ್ ಕಿರಣ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಇದನ್ನು ಓದಿ: ಶಿವಮೊಗ್ಗ | ಮೈಸೂರು “ಕುವೆಂಪು ಎಕ್ಸ್‌ಪ್ರೆಸ್” ರೈಲಿನಲ್ಲಿ ಬೆಂಕಿ: ನಿಖರ ಕಾರಣವೇನು? ದೊಡ್ಡ ಅನಾಹುತ ತಪ್ಪಿದ್ದೇಗೆ?
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply