ದಾವಣಗೆರೆ ಜಿಲ್ಲೆಯಲ್ಲಿ ಉನ್ನತ ಮಟ್ಟದ ಸ್ಪರ್ಧಾತ್ಮಕ ತರಬೇತಿ ಕೇಂದ್ರದ ಕೊರತೆಯನ್ನು ನೀಗಿಸಲು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ದೂರದೃಷ್ಟಿಯೊಂದಿಗೆ ಈ ಮಹತ್ವದ ಹೆಜ್ಜೆ ಇಡಲಾಗಿದೆ. ಎಸ್.ಎಸ್.ಕೇರ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಪ್ರತಿಷ್ಠಿತ ಐ.ಎ.ಎಸ್. ಬಾಬಾ ಸಂಸ್ಥೆ ಯೊಂದಿಗೆ ಒಡಂಬಡಿಕೆ ಮಾಡಿಕೊಂಡು, ದಾವಣಗೆರೆ ವಿಶ್ವವಿದ್ಯಾನಿಲಯದ ಸಹಭಾಗಿತ್ವದಲ್ಲಿ “ಸಂಕಲ್ಪ” ಉಚಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವನ್ನು ಪ್ರಾರಂಭಿಸಲಾಗಿದೆ.
ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?
ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಬೆಂಗಳೂರು, ದೆಹಲಿ, ಧಾರವಾಡದಂತಹ ನಗರಗಳಿಗೆ ತೆರಳಿ ಲಕ್ಷಾಂತರ ರೂಪಾಯಿ ಶುಲ್ಕ ಪಾವತಿಸಿ ತರಬೇತಿ ಪಡೆಯುತ್ತಿದ್ದಾರೆ. ಇದನ್ನು ತಪ್ಪಿಸಲು, ದಾವಣಗೆರೆಯಲ್ಲೇ ಉನ್ನತ ಮಟ್ಟದ ತರಬೇತಿ ನೀಡುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ.
ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ತರಬೇತಿ ಕೇಂದ್ರದ ವಿಳಾಸ:
ದಾವಣಗೆರೆ ನಗರದ ದೃಶ್ಯಕಲಾ ಮಹಾವಿದ್ಯಾಲಯದ ಆವರಣದಲ್ಲಿರುವ ಆರ್ಟ್ ಗ್ಯಾಲರಿ ಕಟ್ಟಡದಲ್ಲಿ ಸುಸರ್ಜಿತ ಗ್ರಂಥಾಲಯದೊಂದಿಗೆ ಈ ತರಬೇತಿ ಕೇಂದ್ರ ಕಾರ್ಯನಿರ್ವಹಿಸಲಿದೆ. ಐ.ಎ.ಎಸ್. ಬಾಬಾ ತರಬೇತಿ ಸಂಸ್ಥೆಯ ಮುಖ್ಯಸ್ಥ ಮೋಹನ್ ಅವರು ದಾವಣಗೆರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ತರಬೇತಿ ನೀಡಲು ಮುಂದಾಗಿದ್ದಾರೆ.
ಪ್ರಮುಖ ದಿನಾಂಕಗಳು ಮತ್ತು ನೋಂದಣಿ ಪ್ರಕ್ರಿಯೆ:
ನೋಂದಣಿ ಪ್ರಾರಂಭ: ಜುಲೈ 18, 2025 ರಿಂದ ಜುಲೈ 24, 2025 ರವರೆಗೆ.
ಆಸಕ್ತ ವಿದ್ಯಾರ್ಥಿಗಳು ಗೂಗಲ್ ಫಾರ್ಮ್ ಅಥವಾ ಕ್ಯೂಆರ್ ಕೋಡ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. (ಪೋಸ್ಟರ್ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ).
ಇದನ್ನು ಓದಿ: ಕ್ರೆಡಿಟ್ ಕಾರ್ಡ್ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಸ್ಕಾಲರ್ಶಿಪ್ ಪರೀಕ್ಷೆ (ಲಿಖಿತ ಪರೀಕ್ಷೆ): ಜುಲೈ 27, 2025 ರಂದು ದಾವಣಗೆರೆ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ.
ಫಲಿತಾಂಶ ಪ್ರಕಟಣೆ: ಜುಲೈ 29, 2025 ರಂದು.
ಸ್ಕಾಲರ್ಶಿಪ್ ಪರೀಕ್ಷೆಯ ಮೂಲಕ 300 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಉಚಿತ ತರಬೇತಿ ನೀಡಲಾಗುವುದು.
ತರಬೇತಿ ಶಿಬಿರದ ಉದ್ಘಾಟನೆ: ಆಗಸ್ಟ್ 3, 2025 ರ ಭಾನುವಾರ ಬೆಳಿಗ್ಗೆ 11:00 ಗಂಟೆಗೆ ಶಾಮನೂರು ಎಸ್.ಎಸ್. ಮಲ್ಲಿಕಾರ್ಜುನ್ ಸಾಂಸ್ಕೃತಿಕ ಕೇಂದ್ರ, ಬಿ.ಐ.ಇ.ಟಿ ಕಾಲೇಜು ಆವರಣ, ದಾವಣಗೆರೆ.
ತರಬೇತಿ ಪ್ರಾರಂಭ: ಆಗಸ್ಟ್ 4, 2025 ರ ಸೋಮವಾರ ಬೆಳಿಗ್ಗೆ 10:30ಕ್ಕೆ ದಾವಣಗೆರೆ ದೃಶ್ಯಕಲಾ ಮಹಾವಿದ್ಯಾಲಯ ಆವರಣದಲ್ಲಿ ‘ಸಂಕಲ್ಪ’ ತರಬೇತಿ ಕೇಂದ್ರದಲ್ಲಿ.
ತರಬೇತಿ ಅವಧಿ: 8 ರಿಂದ 9 ತಿಂಗಳು.
ಇದನ್ನು ಓದಿ: ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…
IASbaba ಕುರಿತು:
- IASbaba ಒಂದು ವಿಶ್ವಾಸಾರ್ಹ ಸಂಸ್ಥೆಯಾಗಿದ್ದು, 1000 ಕ್ಕೂ ಹೆಚ್ಚು ಯಶಸ್ವಿ ಅಭ್ಯರ್ಥಿಗಳನ್ನು ಹೊಂದಿದೆ.
- ಅಭಿನವ ಕಾರ್ಯಕ್ರಮಗಳು ಮತ್ತು ನವೀನ ಕಲಿಕಾ ವಿಧಾನಗಳಿಂದ IASbaba ಹೆಸರುವಾಸಿಯಾಗಿದೆ.
- ಬೆಂಗಳೂರು, ದೆಹಲಿ, ಪುಣೆ, ಲಕ್ನೋ ಮತ್ತು ಭೋಪಾಲ್ ಸೇರಿದಂತೆ ವಿವಿಧ ನಗರಗಳಲ್ಲಿ ಶಾಖೆಗಳನ್ನು ಹೊಂದಿದೆ.
- ಆಫ್ಲೈನ್ ಮತ್ತು ಆನ್ಲೈನ್ ಎರಡೂ ವಿಧಾನಗಳಲ್ಲಿ ತರಬೇತಿ ನೀಡಲಾಗುತ್ತದೆ.
ಇದನ್ನು ಓದಿ: ಎಕ್ಸ್ಪ್ರೆಸ್” ರೈಲಿನಲ್ಲಿ ಬೆಂಕಿ: ನಿಖರ ಕಾರಣವೇನು? ದೊಡ್ಡ ಅನಾಹುತ ತಪ್ಪಿದ್ದೇಗೆ?
ಈ ಸದವಕಾಶವನ್ನು ಉಪಯೋಗಿಸಿಕೊಳ್ಳುವಂತೆ ದಾವಣಗೆರೆ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ರಮೇಶ್ ಸಿ ಕೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸ್ಕ್ಯಾನ್ ಮಾಡಿ ಅಥವಾ ಸಂಪರ್ಕಿಸಿ:
ಮೊಬೈಲ್ ಸಂಖ್ಯೆ: 72599 52520
ವೆಬ್ಸೈಟ್: IASbaba.com
ದಾವಣಗೆರೆ ಹಾಗೂ ಸುತ್ತಮುತ್ತಲಿನ ವಿದ್ಯಾರ್ಥಿಗಳು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಿ! ನಿಮ್ಮ ಕನಸುಗಳಿಗೆ ‘ಸಂಕಲ್ಪ’ದೊಂದಿಗೆ ರೆಕ್ಕೆ ನೀಡಲು ಸಿದ್ಧರಾಗಿ.
ಇದೇ ರೀತಿಯ ಉತ್ತಮ ಅವಕಾಶಗಳು ಮತ್ತು ಸ್ಥಳೀಯ ಸುದ್ದಿಗಳಿಗಾಗಿ ಶಿವಮೊಗ್ಗ ಎಕ್ಸ್ಪ್ರೆಸ್ ನ್ಯೂಸ್ ಚಾನೆಲ್ ಅನ್ನು ವೀಕ್ಷಿಸುತ್ತಿರಿ!
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply