ಶಿವಮೊಗ್ಗ : ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ಬಳಿ ಇಂದು ಬೆಳಗ್ಗೆ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ.
ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?
ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಆನಂದಪುರದಿಂದ ಸಾಗರ ಕಡೆಗೆ ಬರುತ್ತಿದ್ದ ಟ್ರಕ್ ನಡುವೆ ಈ ಅಪಘಾತ ಸಂಭವಿಸಿದೆ. ಕಚೇರಿ ಮತ್ತು ಶಾಲಾ-ಕಾಲೇಜು ಸಮಯವಾಗಿದ್ದರಿಂದ ಬಸ್ಸಿನಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ಹೆಚ್ಚಾಗಿದ್ದರು ಎಂದು ತಿಳಿದುಬಂದಿದೆ.
ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣ ರಕ್ಷಣೆಗೆ ಧಾವಿಸಿದ್ದು, ಗಾಯಾಳುಗಳನ್ನು ಕೂಡಲೇ ಆನಂದಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಶೇಷವಾಗಿ, ಸಾಗರದ ಮರ್ಕಜ್ ಶಾಲೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ಸಿನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಸ್ಥಳೀಯರು ಮಾನವೀಯತೆ ಮೆರೆದಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆ ಮತ್ತು ನೆರವು ದೊಡ್ಡ ಅನಾಹುತವನ್ನು ತಪ್ಪಿಸಿದೆ.
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಅಪಘಾತದಿಂದಾಗಿ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ಹೆದ್ದಾರಿಯಲ್ಲಿ ಬಹುಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಇದನ್ನು ಓದಿ: ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…
ಇದನ್ನು ಓದಿ: ಎಕ್ಸ್‌ಪ್ರೆಸ್” ರೈಲಿನಲ್ಲಿ ಬೆಂಕಿ: ನಿಖರ ಕಾರಣವೇನು? ದೊಡ್ಡ ಅನಾಹುತ ತಪ್ಪಿದ್ದೇಗೆ?
ಈ ಕುರಿತು ನಿಮ್ಮ ಅನಿಸಿಕೆಗಳೇನು? ಕಾಮೆಂಟ್‌ಗಳಲ್ಲಿ ತಿಳಿಸಿ.
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply