ದರ್ಶನ್‌ಗೆ ಬಿಗ್ ರಿಲೀಫ್ ಸಿಗುತ್ತಾ? ರೇಣುಕಾಸ್ವಾಮಿ ಕೇಸ್: ಸುಪ್ರೀಂ ತೀರ್ಪು 10 ದಿನಗಳವರೆಗೆ ಮುಂದಕ್ಕೆ! ಏನಿದು ಅಚ್ಚರಿಯ ತಿರುವು?

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಕುರಿತು ಇಂದು ಸುಪ್ರೀಂ ಕೋರ್ಟ್ ಮಹತ್ವದ ವಿಚಾರಣೆ ನಡೆಸಿದೆ. ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ, ತೀರ್ಪನ್ನು ಅಚ್ಚರಿಯ ರೀತಿಯಲ್ಲಿ 10 ದಿನಗಳವರೆಗೆ ಕಾಯ್ದಿರಿಸಿದೆ!

ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?

ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಆರ್. ಮಹದೇವನ್ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸಿದ್ದು, ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ ಎನ್ನಲಾಗಿದೆ. ರಾಜ್ಯ ಸರ್ಕಾರದ ಪರವಾಗಿ ಸಿದ್ಧಾರ್ಥ್ ಲೂಥ್ರಾ ಹಾಗೂ ದರ್ಶನ್ ಪರವಾಗಿ ಸಿದ್ಧಾರ್ಥ್ ದವೆ ವಾದ ಮಂಡಿಸಿದರು.

ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!

ಜಾಹಿರಾತು:

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಸದ್ಯ ‘ಡೆವಿಲ್’ ಸಿನಿಮಾ ಶೂಟಿಂಗ್‌ಗಾಗಿ ಥೈಲ್ಯಾಂಡ್‌ಗೆ ತೆರಳಿರುವ ದರ್ಶನ್ ನಾಳೆ ಹಿಂದಿರುಗಲಿದ್ದಾರೆ. ಈ ನಡುವೆ, ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿರುವ ನಿರ್ಧಾರ ಪ್ರಕರಣಕ್ಕೆ ಮತ್ತಷ್ಟು ಕುತೂಹಲ ತುಂಬಿದೆ. ಮುಂದಿನ 10 ದಿನಗಳಲ್ಲಿ ಸುಪ್ರೀಂ ಕೋರ್ಟ್ ಏನು ನಿರ್ಧಾರ ಕೈಗೊಳ್ಳಲಿದೆ? ದರ್ಶನ್ ಜಾಮೀನು ರದ್ದಾಗಲಿದೆಯೇ ಅಥವಾ ಯಥಾಸ್ಥಿತಿ ಮುಂದುವರೆಯಲಿದೆಯೇ? ಕಾದುನೋಡಬೇಕಿದೆ.

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಇದನ್ನು ಓದಿ: ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…

ಇದನ್ನು ಓದಿ:  ಎಕ್ಸ್‌ಪ್ರೆಸ್” ರೈಲಿನಲ್ಲಿ ಬೆಂಕಿ: ನಿಖರ ಕಾರಣವೇನು? ದೊಡ್ಡ ಅನಾಹುತ ತಪ್ಪಿದ್ದೇಗೆ?

ಜಾಹಿರಾತು:

 

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.