ಬೆಂಗಳೂರು: ಎಸ್ಎಸ್ಎಲ್ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಬೇಕಾದ ಕನಿಷ್ಠ ಅಂಕಗಳ ಪ್ರಮಾಣವನ್ನು ಶೇ.35ರಿಂದ ಶೇ.33ಕ್ಕೆ ಇಳಿಸಿ ಗುರುವಾರ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.
ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?
ಹೊಸ ನಿಯಮಗಳೇನು?
ಉತ್ತೀರ್ಣ ಅಂಕ ಕಡಿತ: ಇನ್ನು ಮುಂದೆ ಆಂತರಿಕ ಮೌಲ್ಯಮಾಪನ (Internal Assessment) ಮತ್ತು ಬಾಹ್ಯ ಪರೀಕ್ಷೆ (External Exam) ಎರಡರ ಸರಾಸರಿಯಲ್ಲಿ ಕನಿಷ್ಠ ಶೇ.33 ಅಂಕಗಳನ್ನು ಗಳಿಸಿದರೆ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಾರೆ.
ಒಟ್ಟು ಅಂಕಗಳು: ಒಟ್ಟು 625 ಅಂಕಗಳಲ್ಲಿ ಕನಿಷ್ಠ 206 ಅಂಕಗಳನ್ನು ಗಳಿಸಬೇಕು. ಇದರ ಜೊತೆಗೆ, ಆಯಾ ವಿಷಯದ ಒಟ್ಟು ಅಂಕಗಳಲ್ಲಿ ಪ್ರತೀ ವಿಷಯದಲ್ಲಿ ಕನಿಷ್ಠ ಶೇ.30 ಅಂಕಗಳನ್ನು ಗಳಿಸುವುದು ಕಡ್ಡಾಯ.
ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಇದನ್ನು ಓದಿ: ಕ್ರೆಡಿಟ್ ಕಾರ್ಡ್ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಪ್ರಾಯೋಗಿಕ ಪರೀಕ್ಷೆ ಇಲ್ಲದ ವಿಷಯಗಳು: ಪಿಯುಸಿಯಲ್ಲಿ ಯಾವುದೇ ಪ್ರಾಯೋಗಿಕ ಪರೀಕ್ಷೆ (Practical Exam) ಅಥವಾ ಆಂತರಿಕ ಮೌಲ್ಯಮಾಪನ (Internal Assessment) ಇಲ್ಲದ ವಿಷಯಗಳಲ್ಲಿ 80 ಅಂಕಗಳ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಯು ಅಂತಹ ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 24 ಅಂಕಗಳನ್ನು ಪಡೆಯಬೇಕು.
ರಾಜ್ಯ ಸರ್ಕಾರವು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕಾಯ್ದೆ-1966ಕ್ಕೆ ತಿದ್ದುಪಡಿ ತಂದಿದ್ದು, ಇದರ ಅನ್ವಯ ಈ ಬದಲಾವಣೆ ಮಾಡಲಾಗಿದೆ. ಹೊಸ ನಿಯಮಗಳಿಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಸರ್ಕಾರ 15 ದಿನಗಳ ಕಾಲಾವಕಾಶ ನೀಡಿದೆ.
ಈ ನಿರ್ಧಾರದಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.
ಹೆಚ್ಚಿನ ಮಾಹಿತಿ ಹಾಗೂ ಜಿಲ್ಲೆಯ ಇತ್ತೀಚಿನ ಅಪ್ಡೇಟ್ಗಳಿಗಾಗಿ ಶಿವಮೊಗ್ಗ ಎಕ್ಸ್ಪ್ರೆಸ್ ನ್ಯೂಸ್ ಪುಟವನ್ನು ಲೈಕ್ ಮಾಡಿ ಮತ್ತು ಫಾಲೋ ಮಾಡಿ.
ಇದನ್ನು ಓದಿ: ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…
ಇದನ್ನು ಓದಿ: ಎಕ್ಸ್ಪ್ರೆಸ್” ರೈಲಿನಲ್ಲಿ ಬೆಂಕಿ: ನಿಖರ ಕಾರಣವೇನು? ದೊಡ್ಡ ಅನಾಹುತ ತಪ್ಪಿದ್ದೇಗೆ?
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply