ಶಿವಮೊಗ್ಗ: ನಂದಿನಿ ಹಾಲಿನ ಅಧಿಕೃತ ಮಾರಾಟಗಾರರು GSTಯಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ, ನಂದಿನಿ ಹಾಲು ಅಧಿಕೃತ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?
ಏನಿದು ಸಮಸ್ಯೆ?
ಹೆಚ್ಚಿನ ನಂದಿನಿ ಡೀಲರ್‌ಗಳು GST ವ್ಯಾಪ್ತಿಗೆ ಬರುತ್ತಿರುವುದರಿಂದ ತೀವ್ರ ತೊಂದರೆಯಾಗುತ್ತಿದೆ ಎಂದು ಸಂಘದವರು ಅಳಲು ತೋಡಿಕೊಂಡಿದ್ದಾರೆ. ಪ್ರಸ್ತುತ ನಮಗೆ ಶೇ. 3ರಿಂದ 4ರಷ್ಟು ಮಾತ್ರ ಲಾಭಾಂಶ (ಮಾರ್ಜಿನ್) ಸಿಗುತ್ತದೆ. ಇದರಿಂದ ವಾರ್ಷಿಕ ಕೇವಲ ಒಂದು ಲಕ್ಷದಿಂದ ಎರಡು ಲಕ್ಷ ರೂ. ವರೆಗೆ ಆದಾಯ ಗಳಿಸುವುದು ಕಷ್ಟವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮನೆ ಬಾಡಿಗೆ, ಮಕ್ಕಳ ಶಿಕ್ಷಣ, ಆರೋಗ್ಯ ವೆಚ್ಚಗಳನ್ನು ನಿರ್ವಹಿಸುವುದು ದುಸ್ತರವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಪ್ರಮುಖ ಬೇಡಿಕೆಗಳು:
- GST ವ್ಯಾಪ್ತಿಯಲ್ಲಿ ವಾರ್ಷಿಕ ₹1 ಕೋಟಿ ವಹಿವಾಟು ನಡೆಸಲು ಅವಕಾಶ ನೀಡಬೇಕು.
- GST ವ್ಯಾಪ್ತಿಗೆ ಬಂದ ಕಾರಣ ಬಿಪಿಎಲ್ ಕಾರ್ಡ್ ರದ್ದಾಗಿದ್ದು, ಆರೋಗ್ಯ ವಿಮೆ, ಸರ್ಕಾರಿ ಸೌಲಭ್ಯಗಳು ಮತ್ತು ಕಾರ್ಮಿಕ ಕಾರ್ಡ್‌ಗಳಿಂದಲೂ ವಂಚಿತರಾಗಿದ್ದಾರೆ. ಈ ಎಲ್ಲ ಸಮಸ್ಯೆಗಳನ್ನು ಪರಿಗಣಿಸಿ ಸೂಕ್ತ ಪರಿಹಾರ ಕಲ್ಪಿಸಿಕೊಡಬೇಕು.
ಈ ಮನವಿ ಸಲ್ಲಿಕೆ ವೇಳೆ ಸಂಘದ ಅಧ್ಯಕ್ಷ ಯು.ಕೆ. ಪ್ರಕಾಶ್, ಸಹ ಕಾರ್ಯದರ್ಶಿ ಮೋಹನ್, ಖಜಾಂಚಿ ಕೆ.ಕೆ. ಚಂದ್ರಶೇಖರ್, ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ಅಧ್ಯಕ್ಷ ದೇವರಾಜ್ ಎಂ.ಸಿ., ನಾಗರಾಜ್, ಮಲ್ಲಿಕಾರ್ಜುನ್, ಜಲೀಲ್ ಸಾಬ್, ನವೀನ್, ರಾಘವೇಂದ್ರ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹೆಚ್ಚಿನ ಮಾಹಿತಿ ಹಾಗೂ ಜಿಲ್ಲೆಯ ಇತ್ತೀಚಿನ ಅಪ್‌ಡೇಟ್‌ಗಳಿಗಾಗಿ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ಪುಟವನ್ನು ಲೈಕ್ ಮಾಡಿ ಮತ್ತು ಫಾಲೋ ಮಾಡಿ.
ಇದನ್ನು ಓದಿ: ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…
ಇದನ್ನು ಓದಿ: ಎಕ್ಸ್‌ಪ್ರೆಸ್” ರೈಲಿನಲ್ಲಿ ಬೆಂಕಿ: ನಿಖರ ಕಾರಣವೇನು? ದೊಡ್ಡ ಅನಾಹುತ ತಪ್ಪಿದ್ದೇಗೆ?
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply