ಸಾಗರ: ಸಿಗಂದೂರು ದೇವಿ ದರ್ಶನ ಅವಧಿ ವಿಸ್ತರಣೆ – ಭಕ್ತರಿಗೆ ಸಂತಸ!

ಶಿವಮೊಗ್ಗ: ಸಿಗಂದೂರು ಸೇತುವೆ ಲೋಕಾರ್ಪಣೆಗೊಂಡ ಬೆನ್ನಲ್ಲೇ, ಸಾಗರ ತಾಲೂಕಿನ ಐತಿಹಾಸಿಕ ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರ ದಟ್ಟಣೆ ಹೆಚ್ಚಾಗಿದೆ. ಭಕ್ತರ ಅನುಕೂಲಕ್ಕಾಗಿ ಇದೀಗ ದೇವಿಯ ದರ್ಶನದ ಸಮಯವನ್ನು ವಿಸ್ತರಣೆ ಮಾಡಲಾಗಿದೆ.

ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?

ಸಿಗಂದೂರು ದೇವಿ ದರ್ಶನ ಅವಧಿ ಒಂದೂವರೆ ಗಂಟೆ ಹೆಚ್ಚಳ!

ಹೌದು, ಈ ಮೊದಲು ರಾತ್ರಿ 7:30ರವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿತ್ತು. ಈಗ ಇದನ್ನು ರಾತ್ರಿ 9 ಗಂಟೆಯವರೆಗೆ ವಿಸ್ತರಿಸಲಾಗಿದೆ! ಇದರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಯಾವುದೇ ಆತಂಕವಿಲ್ಲದೆ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಬಹುದು.

ಹೊಸ ದರ್ಶನದ ಸಮಯ ಹೀಗಿದೆ:

  • ಬೆಳಗ್ಗೆ: 5 ಗಂಟೆಯಿಂದ ಮಧ್ಯಾಹ್ನ 2:30ರವರೆಗೆ
  • ಸಂಜೆ: 4 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ

ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!

ಜಾಹಿರಾತು:

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

 

ಈ ಕುರಿತು ದೇವಸ್ಥಾನದ ಕಾರ್ಯದರ್ಶಿ ರವಿಕುಮಾರ್ ಅವರು ಮಾಹಿತಿ ನೀಡಿದ್ದು, ಮೂರು ಹೊತ್ತಿನ ಪ್ರಸಾದ ವ್ಯವಸ್ಥೆಯೂ ಇರಲಿದೆ ಎಂದು ತಿಳಿಸಿದ್ದಾರೆ.

ಸಮಯ ವಿಸ್ತರಣೆಗೆ ಕಾರಣವೇನು?

ಸಿಗಂದೂರು ಸೇತುವೆ ನಿರ್ಮಾಣವಾಗುವ ಮೊದಲು, ಭಕ್ತರು ಶರಾವತಿ ಹಿನ್ನೀರು ದಾಟಲು ಲಾಂಚ್‌ಗಳನ್ನೇ ಆಶ್ರಯಿಸಬೇಕಿತ್ತು. ಲಾಂಚ್ ಸೇವೆ ಸಂಜೆ 6 ಗಂಟೆಗೆ ನಿಲ್ಲುತ್ತಿತ್ತು. ಇದರಿಂದ ದೂರದಿಂದ ಬರುವ ಭಕ್ತರಿಗೆ ರಾತ್ರಿ ತಂಗಲು ಸಮಸ್ಯೆಯಾಗುತ್ತಿತ್ತು. ಸೇತುವೆ ನಿರ್ಮಾಣದಿಂದಾಗಿ ಈ ಸಮಸ್ಯೆಗೆ ಪರಿಹಾರ ಸಿಕ್ಕಿದ್ದು, ಈಗ ಭಕ್ತರು ಸುಲಭವಾಗಿ ದೇವಸ್ಥಾನ ತಲುಪುತ್ತಿದ್ದಾರೆ. ಇದೇ ಕಾರಣಕ್ಕೆ ದರ್ಶನದ ಅವಧಿಯನ್ನು ವಿಸ್ತರಿಸಲಾಗಿದೆ.

ಈ ಹೊಸ ಬದಲಾವಣೆಯಿಂದ ಸಿಗಂದೂರು ಭಕ್ತರಿಗೆ ಸಂತಸ ತಂದಿದೆ. ನಿಮ್ಮ ಅನಿಸಿಕೆಗಳೇನು? ಕಾಮೆಂಟ್‌ಗಳಲ್ಲಿ ತಿಳಿಸಿ.

 

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಇದನ್ನು ಓದಿ: ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…

ಇದನ್ನು ಓದಿ:  ಎಕ್ಸ್‌ಪ್ರೆಸ್” ರೈಲಿನಲ್ಲಿ ಬೆಂಕಿ: ನಿಖರ ಕಾರಣವೇನು? ದೊಡ್ಡ ಅನಾಹುತ ತಪ್ಪಿದ್ದೇಗೆ?

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.