ಶಿವಮೊಗ್ಗ : ಶಿವಮೊಗ್ಗ ನಗರದ ಮೇಲಿನ ತುಂಗಾನಗರದಲ್ಲಿ ತಡರಾತ್ರಿ ಭೀಕರ ಕೊಲೆಯೊಂದು ನಡೆದಿದೆ. ಮಣಿಕಂಠ (38) ಎಂಬ ಯುವಕನನ್ನು ಆತನ ಮನೆಯಲ್ಲಿಯೇ ತಲೆ ಮೇಲೆ ಕಲ್ಲು
ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಘಟನೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?
ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಮಣಿಕಂಠ, ತನ್ನ ಮನೆಯಲ್ಲಿ ಒಬ್ಬನೇ ವಾಸವಾಗಿದ್ದ ಎಂದು ತಿಳಿದುಬಂದಿದೆ. ಬೆಳಗಿನ ಜಾವ ಘಟನೆ ಬೆಳಕಿಗೆ ಬಂದಿದ್ದು, ರಕ್ತದ ಮಡುವಿನಲ್ಲಿ ಮಣಿಕಂಠ ಬಿದ್ದಿರುವುದು ಕಂಡುಬಂದಿದೆ. ಮಣಿಕಂಠನ ಜೊತೆ ಮಲಗಿದ್ದ ಆತನ ತಮ್ಮ ನಾಪತ್ತೆಯಾಗಿದ್ದಾನೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ. ಊಟ ತಿಂಡಿಯನ್ನು ಪಕ್ಕದಲ್ಲಿದ್ದ ಸಹೋದರಿಯ ಮನೆಯಿಂದ ಮಣಿಕಂಠನಿಗೆ ತಲುಪಿಸಲಾಗುತ್ತಿತ್ತು. ಬೆಳಿಗ್ಗೆ ಟೀ ನೀಡಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ..
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಕೊಲೆ ನಡೆದ ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಬು ಅಂಜನಪ್ಪ, ಹಾಗೂ ಇನ್ಸ್‌ಪೆಕ್ಟರ್ ಕೆ.ಟಿ. ಗುರುರಾಜ್ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕೊಲೆಗೆ ನಿಖರ ಕಾರಣವೇನು? ಮಣಿಕಂಠನ ತಮ್ಮನೇ ಕೊಲೆ ಮಾಡಿ ಪರಾರಿಯಾಗಿದ್ದಾನಾ? ಅಥವಾ ಬೇರೆ ಯಾರಾದರೂ ಈ ಕೃತ್ಯ ಎಸಗಿದ್ದಾರಾ? ದುಷ್ಕರ್ಮಿಗಳು ಯಾರು? ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಪೊಲೀಸರು ತನಿಖೆ ಮುಂದುವರಿಸಿದ್ದು, ನಾಪತ್ತೆಯಾಗಿರುವ ವ್ಯಕ್ತಿಗಾಗಿ ಬಲೆ ಬೀಸಿದ್ದಾರೆ.
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply