ಮತ್ತೆ SC/ST ಅನುದಾನ ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್! – ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಆಕ್ರೋಶ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಮತ್ತೆ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿದೆ. ಕಳೆದ ವರ್ಷ ಇದೇ ವಿಚಾರ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಮತ್ತೆ SC/STಗೆ ಮಾತ್ರ ಮೀಸಲಿಟ್ಟ SCSP-TSP (ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ) ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲು ಸರ್ಕಾರ ಚಿಂತನೆ ನಡೆಸಿದೆ.

ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?

 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನದಿಂದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣ ಬಳಸಿದ ಕಾರಣದಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಮ್ಮೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ.

ಜಾಹಿರಾತು:

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

SCSP-TSP ಯೋಜನೆಯಡಿ 2025-26ರ ಸಾಲಿನಲ್ಲಿ 42,017.51 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಈ ಪೈಕಿ 11,896.84 ಕೋಟಿ ರೂ. ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲು ಸರ್ಕಾರ ಚಿಂತನೆ ನಡೆಸಿದೆ.

ಯಾವ ಯೋಜನೆಗೆ ಎಷ್ಟು ಡೈವರ್ಟ್?

  • ಯುವನಿಧಿ ಯೋಜನೆಗೆ: 162 ಕೋಟಿ ರೂಪಾಯಿ
  • ಗೃಹಲಕ್ಷ್ಮೀ ಯೋಜನೆಗೆ: 7,438 ಕೋಟಿ ರೂ.
  • ಗೃಹಜ್ಯೋತಿ ಯೋಜನೆಗೆ: 2,626 ಕೋಟಿ ರೂ.
  • ಶಕ್ತಿ ಯೋಜನೆಗೆ: 1,537 ಕೋಟಿ ರೂ.
  • ಅನ್ನಭಾಗ್ಯ ಯೋಜನೆಗೆ: 1,670 ಕೋಟಿ ರೂ.

ಈ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗೆ ಕತ್ತರಿ ಹಾಕಿ, ಕಲ್ಯಾಣ ಯೋಜನೆಗಳ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂಬ ಆಕ್ರೋಶ ಭುಗಿಲೆದ್ದಿದೆ.

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.