ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ಆಶ್ರಯ ವಿಭಾಗದ ಸಮುದಾಯ ಸಂಘಟನಾ ಅಧಿಕಾರಿ ಎ.ಪಿ.ಶಶಿಧರ್ ಎಂಬುವವರು, ಮನೆ ಖಾತೆ ಮಾಡಿಕೊಡಲು ₹10,000 ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ನೆಹರೂ ರಸ್ತೆಯ ನೇತಾಜಿ ಸುಭಾಷಚಂದ್ರ ಬೋಸ್ ವಾಣಿಜ್ಯ ಸಂಕೀರ್ಣದಲ್ಲಿರುವ ಆಶ್ರಯ ಕಚೇರಿಯಲ್ಲಿ ಇಂದು ಸಂಜೆ ವೇಳೆಗೆ ಈ ಕಾರ್ಯಾಚರಣೆ ನಡೆದಿದೆ.
ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?
ಪ್ರಕರಣದ ಹಿನ್ನೆಲೆ:
ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯ ನಿವಾಸಿ ಮೊಹಮ್ಮದ್ ಆಸಿಫ್ ಉಲ್ಲಾ ರವರು, ತಾವು ಅಹ್ಮದ್ ಅಲಿ ಎಂಬುವವರಿಂದ ಖರೀದಿಸಿದ್ದ ಮನೆಯನ್ನು ತಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ಕೋರಿ ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು. ಈ ಕಾರ್ಯಕ್ಕಾಗಿ ಆಶ್ರಯ ವಿಭಾಗದ ಅಧಿಕಾರಿ ಶಶಿಧರ್ ₹10,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಲಂಚದ ಬೇಡಿಕೆ ಕುರಿತ ಸಂಭಾಷಣೆಯನ್ನು ದೂರುದಾರ ಮೊಹಮ್ಮದ್ ಆಸಿಫ್ ವಾಯ್ಸ್ ರೆಕಾರ್ಡ್ ಮಾಡಿಕೊಂಡು, ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರುದಾರರು ಲಂಚ ನೀಡಲು ಇಷ್ಟವಿಲ್ಲದೆ ಇದ್ದುದರಿಂದ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದರು.
ಯಶಸ್ವಿ ಕಾರ್ಯಾಚರಣೆ:
ದೂರಿನ ಆಧಾರದ ಮೇಲೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ, ಇಂದು ಸಂಜೆ 4.15ರ ಸುಮಾರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಂಚದ ಹಣವನ್ನು ಪಡೆಯುತ್ತಿದ್ದಾಗ ಶಶಿಧರ್ರವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಲಂಚದ ಹಣವನ್ನು ಸ್ಥಳದಲ್ಲಿಯೇ ವಶಪಡಿಸಿಕೊಂಡು, ಶಶಿಧರ್‌ನನ್ನು ತನಿಖೆಗಾಗಿ ವಶಕ್ಕೆ ಪಡೆಯಲಾಗಿದೆ.
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ತಂಡ:
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಂಜುನಾಥ ಚೌಧರಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಉಪಾಧ್ಯಕ್ಷ ಬಿ.ಪಿ.ಚಂದ್ರಶೇಖರ್ ಅವರ ನೇತೃತ್ವದಲ್ಲಿ, ಇನ್ಸ್‌ಪೆಕ್ಟರ್‌ಗಳಾದ ರುದ್ರೇಶ್.ಕೆ.ಪಿ., ಗುರುರಾಜ್ ಮೈಲಾರ್, ವೀರಬಸಪ್ಪ ಎಲ್.ಕುಸಲಾಪುರ ಹಾಗೂ ಸಿಬ್ಬಂದಿಗಳಾದ ಯೋಗೇಶ್, ಮಂಜುನಾಥ್, ಟೀಕಪ್ಪ, ಸುರೇಂದ್ರ, ಪ್ರಶಾಂತ್ ಕುಮಾರ್, ದೇವರಾಜ್, ಪ್ರಕಾಶ್ ಬಾರಿಮರದ, ಅರುಣ್ ಕುಮಾರ್, ಆದರ್ಶ, ಚಂದ್ರಿಬಾಯಿ, ಪ್ರದೀಪ, ಗಂಗಾಧರ, ಆನಂದ, ಮತ್ತು ಗೋಪಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಸದ್ಯ ಆರೋಪಿ ಶಶಿಧರ್ ವಿರುದ್ಧ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply