ಶಿಕಾರಿಪುರಕ್ಕೆ ಹೆಚ್ಚುವರಿ ಬಸ್ ಸೇವೆ ಕಲ್ಪಿಸಲು ಮನವಿ| ವಿದ್ಯಾರ್ಥಿ ಹಾಗೂ ಗ್ರಾಮಸ್ಥರ ಸಮಸ್ಯೆಗೆ ನೆರವಾದ ಕರವೇ; ಸ್ಪಂದಿಸಿದ ಅಧಿಕಾರಿಗಳು

ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ಪುನೇದಹಳ್ಳಿ, ಕುಸ್ಕೂರು ಮತ್ತು ಹಿರೇಜಂಬೂರು ಗ್ರಾಮಗಳ ವಿದ್ಯಾರ್ಥಿಗಳಿಗೆ ಆಗುತ್ತಿದ್ದ ಬಸ್ ಸಮಸ್ಯೆಯನ್ನು ಪರಿಹರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?

ಈ ಗ್ರಾಮಗಳ ಮೂಲಕ ಕೇವಲ ಎರಡು ಬಸ್‌ಗಳು ಸಂಚರಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ತೀವ್ರ ತೊಂದರೆಯಾಗುತ್ತಿತ್ತು. ಬಸ್‌ಗಳಲ್ಲಿ ಜಾಗವಿಲ್ಲದೆ ಹಲವು ವಿದ್ಯಾರ್ಥಿಗಳನ್ನು ಕೆಳಗಿಳಿಸಲಾಗುತ್ತಿದ್ದು, ದಟ್ಟಣೆಯಿಂದಾಗಿ ಅಪಾಯದ ಸಾಧ್ಯತೆಗಳೂ ಹೆಚ್ಚಿದ್ದವು. ಸಮಯಕ್ಕೆ ಸರಿಯಾಗಿ ಬಸ್‌ಗಳು ಸಿಗದೆ ಪರೀಕ್ಷೆಗಳಿಗೂ ತೊಂದರೆಯಾಗುತ್ತಿತ್ತು. ಇದರಿಂದ ಪೋಷಕರು ತಮ್ಮ ಮಕ್ಕಳನ್ನು ಶಾಲೆ-ಕಾಲೇಜುಗಳಿಗೆ ಬೈಕ್‌ನಲ್ಲಿ ಬಿಟ್ಟು ಬರುವ ಪರಿಸ್ಥಿತಿ ನಿರ್ಮಾಣವಾಗಿತ್ತು

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಈ ಹಿನ್ನೆಲೆಯಲ್ಲಿ, ಕರ್ನಾಟಕ ರಕ್ಷಣಾ ವೇದಿಕೆಯ ಶಿಕಾರಿಪುರ ತಾಲ್ಲೂಕು ಅಧ್ಯಕ್ಷರಾದ ರವಿ ನಾಯ್ಕ್ ಡಿ. ಅವರು ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಮ್ಯಾನೇಜರ್‌ಗೆ ಮನವಿ ಸಲ್ಲಿಸಿದರು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಹೆಚ್ಚುವರಿ ಬಸ್‌ಗಳನ್ನು ಓಡಿಸುವಂತೆ ಮನವಿಯಲ್ಲಿ ಕೋರಲಾಗಿದೆ.

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಅಧಿಕಾರಿಗಳು ಈ ಸಮಸ್ಯೆಗೆ ಸ್ಪಂದಿಸಿದ್ದು, ಶೀಘ್ರದಲ್ಲೇ ಹೆಚ್ಚುವರಿ ಬಸ್ ಸೇವೆಗಳನ್ನು ಆರಂಭಿಸುವುದಾಗಿ ಭರವಸೆ ನೀಡಿದ್ದಾರೆ.

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.