ಶಿವಮೊಗ್ಗ: ಆನಂದಪುರ ಸಮೀಪದ ತ್ಯಾಗರ್ತಿ ಗ್ರಾಮದ ಮಾರಿಕಾಂಬಾ ಸರ್ಕಲ್ನಲ್ಲಿ ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಆನಂದಪುರ ಪೊಲೀಸರು ಬಂಧಿಸಿದ್ದಾರೆ.
ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ವಾಹನ ಸಮೇತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಸರ್ಕಾರದ ಯಾವುದೇ ಪರವಾನಿಗೆ ಇಲ್ಲದೆ, ಎರಡು ಎಮ್ಮೆ, ಒಂದು ಕೋಣ ಹಾಗೂ ಎರಡು ಹೋರಿಗಳನ್ನು ವಾಹನದಲ್ಲಿ ಹಿಂಸಾತ್ಮಕವಾಗಿ ತುಂಬಿಕೊಂಡು ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಸಂಪಳ್ಳಿ ಕಡೆಯಿಂದ ಬಿಳಕಿ ಗ್ರಾಮದ ಶಿಕಾರಿಪುರಕ್ಕೆ ಸಾಗಾಣಿಕೆ ಮಾಡುತ್ತಿದ್ದಾಗ, ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಕ್ರಮ ಸಾಗಾಟ ಬಯಲಾಗಿದ್ದು, ಶಿಕಾರಿಪುರ ತಾಲ್ಲೂಕಿನ ಬಿಳಕಿ ಗ್ರಾಮದ ಮೆಹಬೂಬ್ ಬಾಷಾ ಮತ್ತು ಮಕ್ಬುಲ್ ಸಾಹೇಬ್ ಎಂಬುವವರನ್ನು ಬಂಧಿಸಲಾಗಿದೆ.
ಇದನ್ನು ಓದಿ: ಕ್ರೆಡಿಟ್ ಕಾರ್ಡ್ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply