ಶಿವಮೊಗ್ಗ: ಮೆಸ್ಕಾಂ ಇಲಾಖೆಯಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ, ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಾಸವಾಗಲಿದೆ. ಸೆಪ್ಟೆಂಬರ್ 16 ಮತ್ತು 17 ರಂದು ನಗರದ ಹಲವು ಪ್ರದೇಶಗಳಲ್ಲಿ ನೀರು ಸರಬರಾಜು ಇರುವುದಿಲ್ಲ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದೆ.
ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?
ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಮೆಸ್ಕಾಂನಿಂದ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಇದರಿಂದಾಗಿ ಶುದ್ಧೀಕರಣ ಪ್ರಕ್ರಿಯೆಗೆ ಅಡ್ಡಿಯಾಗಿದ್ದು, ನಗರಕ್ಕೆ ನೀರಿನ ವಿತರಣೆಯಲ್ಲಿ ಸಮಸ್ಯೆಯಾಗಿದೆ. ಸಾರ್ವಜನಿಕರು ಈ ಎರಡು ದಿನಗಳ ಕಾಲ ಸಹಕರಿಸಬೇಕು ಎಂದು ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ನಗರದ ನಿವಾಸಿಗಳು ಈ ಸಮಸ್ಯೆಯನ್ನು ಗಮನಿಸಿ, ಅಗತ್ಯ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವಂತೆ ಸೂಚಿಸಲಾಗಿದೆ.
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply