ಕುರುಬ ಸಮುದಾಯ ಎಸ್ ಟಿ ಪಟ್ಟಿಗೆ: ನಾಳೆ ಸೆ. 16ಕ್ಕೆ ವಿಶೇಷ ಸಭೆ ಕರೆದ ರಾಜ್ಯ ಸರ್ಕಾರ

ಶಿವಮೊಗ್ಗ: ರಾಜ್ಯದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್.ಟಿ) ಪಟ್ಟಿಗೆ ಸೇರಿಸುವ ಪ್ರಕ್ರಿಯೆ ಮಹತ್ವದ ಹಂತ ತಲುಪಿದೆ. ಈ ಸಂಬಂಧ ರಾಜ್ಯ ಸರ್ಕಾರವು ನಾಳೆ, ಸೆಪ್ಟೆಂಬರ್ 16, 2025 ರಂದು ಪ್ರಮುಖ ಸಭೆ ಕರೆದಿದೆ. ಕುರುಬ ಸಮುದಾಯದ ಬಹುದಿನಗಳ ಬೇಡಿಕೆಗೆ ಮನ್ನಣೆ ನೀಡುವ ನಿಟ್ಟಿನಲ್ಲಿ ಸರ್ಕಾರ ಗಂಭೀರ ಹೆಜ್ಜೆ ಇಟ್ಟಿದೆ ಎಂದು ಹೇಳಲಾಗಿದೆ.

ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?

ಸಭೆಯ ಪ್ರಮುಖ ವಿಷಯಗಳು

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ.ಸಭೆಯಲ್ಲಿ ಮುಖ್ಯವಾಗಿ ಈ ಕೆಳಗಿನ ಎರಡು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ:

  • ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಕುರಿತು.
  • ಕರ್ನಾಟಕದ ಬೀದರ್, ಕಲಬುರಗಿ, ಮತ್ತು ಯಾದಗಿರಿ ಜಿಲ್ಲೆಗಳಲ್ಲಿನ ಕುರುಬ ಸಮುದಾಯವನ್ನು ರಾಜ್ಯದ ಗೊಂಡ ಸಮುದಾಯದ ಪರ್ಯಾಯ ಪದವಾಗಿ ಸೇರಿಸುವ ಕುರಿತು.

ಈ ಸಭೆಗೆ ಅಗತ್ಯ ದಾಖಲೆಗಳು ಮತ್ತು ಮಾಹಿತಿಗಳೊಂದಿಗೆ ಹಾಜರಾಗುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಕೇಂದ್ರಕ್ಕೆ ಶಿಫಾರಸು ಮಾಡಿದ್ದ ರಾಜ್ಯ ಸರ್ಕಾರ

ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸಲು 2023ರಲ್ಲಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತು. ಮೈಸೂರು, ಚಾಮರಾಜನಗರ ಜಿಲ್ಲೆಯ ಕೆಲವು ಭಾಗಗಳಲ್ಲಿ ವಾಸಿಸುತ್ತಿರುವ ಕಾಡು ಕುರುಬರು, ಜೇನು ಕುರುಬರು ಎಸ್‌ಟಿ ಮೀಸಲಾತಿಯ ಸೌಲಭ್ಯ ಪಡೆಯುತ್ತಿದ್ದಾರೆ. ಉಳಿದ ಕುರುಬ ಸಮುದಾಯ ಪ್ರಸ್ತುತ ರಾಜ್ಯದ 2 ‘ಎ’ ಪಟ್ಟಿಯಲ್ಲಿದೆ. ಹೀಗಾಗಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಬೇಕು ಎಂದು ಶಿಫಾರಸು ಮಾಡಲಾಗಿತ್ತು.

ಇನ್ನು ಪರಿಶಿಷ್ಟ ಪಂಗಡದ ಮೀಸಲಾತಿಗೆ ಒತ್ತಾಯಿಸಿ ಕನಕಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ 2022ರ ಜನವರಿ 15ರಂದು ಕಾಗಿನೆಲೆಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಫೆ.7ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಿ, ಎಸ್‌ಟಿಗೆ ಸೇರಿಸುವಂತೆ ಹಕ್ಕೊತ್ತಾಯ ಮಾಡಿದ್ದರು.

‘ಕುರುಬರು ಭಾರತದ ಮೂಲ ನಿವಾಸಿಗಳು. 1868 ಮತ್ತು 1901ರ ಜನಗಣತಿಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿತ್ತು. ಸ್ವಾತಂತ್ರ್ಯಾ ನಂತರ ಕೈಬಿಡಲಾಗಿದೆ. ದೇವರಾಜ ಅರಸು ಆಡಳಿತದ ಅವಧಿಯಲ್ಲಿ ಜೇನು ಕುರುಬ ಮತ್ತು ಕಾಡು ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ್ದರು. ತಮಿಳುನಾಡು ಮತ್ತು ಆಂಧ್ರಪ್ರದೇಶಗಳಲ್ಲಿ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಸೌಲಭ್ಯ ಸಿಗುತ್ತಿದೆ. ಹೀಗಾಗಿ ರಾಜ್ಯದಲ್ಲೂ ಕುರುಬರನ್ನೂ ಎಸ್‌ಟಿ ಪಟ್ಟಿಗೆ ಸೇರಿಸಬೇಕು ಎಂಬುವುದು ಸಮುದಾಯದ ಬೇಡಿಕೆಯಾಗಿದೆ.

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.