ಶಿವಮೊಗ್ಗ: ಪರಿಸರ ದಸರಾ – 2025 ರ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪರಿಸರ ದಸರಾ ಕಾರ್ಯಕ್ರಮವು ಪರಿಸರ ಸಂರಕ್ಷಣೆಯ ಮಹತ್ತರ ಸಂದೇಶದೊಂದಿಗೆ ಯಶಸ್ವಿಯಾಗಿದೆ. ನಗರದ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಬಳಿಯ ಯುಟಿಪಿ ಜಾಗದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ಪರಿಸರ ಪ್ರೇಮ ಮೆರೆಯಲಾಯಿತು.
ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?
ಈ ಸಂದರ್ಭದಲ್ಲಿ, ಪರಿಸರ ಸ್ನೇಹಿ ಉತ್ಪನ್ನಗಳನ್ನು ಅಳವಡಿಸಿಕೊಂಡಿರುವ ಸಂಸ್ಥೆಗಳ ಮುಖ್ಯಸ್ಥರಿಗೆ ಪುನರ್ವಸು ಸಂಸ್ಥೆ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಪರಿಸರ ಸಂರಕ್ಷಣೆಗೆ ಕೊಡುಗೆ ನೀಡುತ್ತಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿತ್ತು.
ಇಂದು ಬೆಳಗ್ಗೆ ಮಹಾನಗರ ಪಾಲಿಕೆ ಆವರಣದಲ್ಲಿ ಶಿವಮೊಗ್ಗ ದಸರಾ – 2025 ರ ಅಂಗವಾಗಿ, ಇಂದು ಪರಿಸರ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪರಿಸರ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಸೈಕಲ್ ಜಾಥಾ ವನ್ನು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಜಾಥಾದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪರಿಸರಾಸಕ್ತರು, ಸ್ವಯಂ ಸೇವಾ ಸಂಘಟನೆಗಳ ಸದಸ್ಯರು ಹಾಗೂ ಪಾಲಿಕೆ ಸಿಬ್ಬಂದಿ ಸೇರಿದಂತೆ ಅನೇಕರು ಉತ್ಸಾಹದಿಂದ ಭಾಗವಹಿಸಿದ್ದರು. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಇವರು, ಪರಿಸರ ಸಂರಕ್ಷಣೆಯ ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರ ಗಮನ ಸೆಳೆದರು.
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಕಾರ್ಯಕ್ರಮದಲ್ಲಿ ಪರಿಸರವಾದಿಗಳಾದ ಪ್ರೊ. ಎಲ್.ಕೆ. ಶ್ರೀಪತಿ, ಪ್ರೊ. ಬಿ.ಎಂ. ಕುಮಾರಸ್ವಾಮಿ, ಜಿಲ್ಲಾ ಕಾನೂನು ಪ್ರಾಧಿಕಾರದ ನ್ಯಾಯಾಧೀಶರಾದ ಸಂತೋಷ್, ಶಿವಮೊಗ್ಗ ಸೈಕಲ್ ಕ್ಲಬ್ ಅಧ್ಯಕ್ಷ ಶ್ರೀಕಾಂತ್, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ. ವಿಜಯಕುಮಾರ್, ಪುನರ್ವಸು ಸಂಸ್ಥೆಯ ಗಾಯತ್ರಿ ಮಹೇಶ್, ಪರಿಸರ ನಾಗರಾಜ, ಪರಿಸರ ದಸರಾ ಸಂಚಾಲಕರಾದ ತ್ರಿವೇಣಿ, ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲಾ ಅಧಿಕಾರಿ ಶಿಲ್ಪಾ ಹಾಗೂ ರಮೇಶ್ ಹೆಗಡೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ಪ್ರಯತ್ನವು ಶಿವಮೊಗ್ಗವನ್ನು ಹಸಿರಾಗಿಸಲು ಮತ್ತು ಪರಿಸರ ಜಾಗೃತಿಯನ್ನು ಹೆಚ್ಚಿಸಲು ಪ್ರಮುಖ ಹೆಜ್ಜೆಯಾಗಿದೆ.
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply