ಹೊಸನಗರ ತಾಲೂಕಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಅಕ್ರಮ ಮರಳು ದಂಧೆಗೆ ಬ್ರೇಕ್ ಹಾಕದಿದ್ದರೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ – ಗಿರೀಶ್ ಆಚಾರ್
ಹೊಸನಗರ : ತಾಲೂಕಿನಾದ್ಯಂತ ಪರವಾನಿಗೆ ಇಲ್ಲದೆ ಟಿಪ್ಪರ್ ಗಳ ಮೂಲಕ ಶಿವಮೊಗ್ಗ ಸೇರಿದಂತೆ ಪಟ್ಟಣ ಪ್ರದೇಶಗಳಲ್ಲಿ ನೂರಾರು ಲೋಡ್ ಅಕ್ರಮ ಮರಳು ಸರಬರಾಜಾಗುತ್ತಿದೆ. ನಿತ್ಯವೂ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಈ ಬಗ್ಗೆ ಎಷ್ಟೇ ಮನವಿ ನೀಡಿದರೂ ಪ್ರಯೋಜನವಾಗಿಲ್ಲ, ಇನ್ನು ಅಕ್ರಮ ಮರಳು ತಂದೆಗೆ ಬ್ರೇಕ್ ಹಾಕದಿದ್ದರೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುವುದಾಗಿ ಜನ ಸಂಗ್ರಾಮ ಪರಿಷತ್ ಸದಸ್ಯ ಗಿರೀಶ್ ಆಚಾರ್ ಹೇಳಿಕೆ.
ಹೊಸನಗರ ಮತ್ತು ಸಾಗರ ತಾಲೂಕಿನ ಸುತ್ತಮುತ್ತ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ. ಪರವಾನಿಗೆ ಇಲ್ಲದೆ ಟಿಪ್ಪರ್ ಗಳ ಮೂಲಕ ನೂರಾರು ಲೋಡ್ ಅಕ್ರಮ ಮರಳು ಸರಬರಾಜು ಆಗುತ್ತಿದ್ದು , ಹೆಚ್ಚಿನ ದರಕ್ಕೆ ಮರಳು ಮಾರಿ ಅಕ್ರಮ ಸಂಪಾದನೆಯಲ್ಲಿ ದಂದೆಕೊರರು ತೊಡಗಿಕೊಂಡಿದ್ದಾರೆ.
ಈ ಬಗ್ಗೆ ತಾಲೂಕಿನ ಎಲ್ಲಾ ಇಲಾಖೆಗಳಿಗೆ ಸಾಕಷ್ಟು ಮನವಿ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು ಪ್ರಯೋಜನವಾಗಿಲ್ಲ. ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುವುದಾಗಿ ಗಿರೀಶ್ ಆಚಾರ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮತ್ತು ಲೋಕಾಯುಕ್ತ ಸೇರಿದಂತೆ ವಿವಿದಡೆ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಸಾಕಷ್ಟು ದೂರು ಸಲ್ಲಿಸಿದ್ದೇನೆ, ಆದರೆ ಯಾವುದೇ ಪ್ರಯೋಜನವಾಗಿಲ್ಲ. ಅಕ್ರಮ ಮರಳು ದಂಧೆಯ ಜೊತೆಗೆ ರಾಜಕೀಯ ಮೇಲಾಟವು ತಳಕು ಹಾಕಿಕೊಂಡಿದೆ. ಅಕ್ರಮ ತಡೆಗೆ ರಚಿಸಿರುವ ಟಾಸ್ಕ್ ಫೋರ್ಸ್ ಮತ್ತು ಇತರೆ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಸಾಕಷ್ಟು ಮನವಿಗಳು ಕೊಟ್ಟರು, ಧರಣಿ ನಡೆಸಿದರು ಪ್ರಯೋಜನವಾಗುತ್ತಿಲ್ಲ ಹಾಗಾಗಿ ಮುಂದಿನ ದಿನಗಳಲ್ಲಿ ಅಕ್ರಮ ಮರಳು ತಂದೆಗೆ ಬ್ರೇಕ್ ಹಾಕದಿದ್ದರೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುವುದಾಗಿ ಗಿರೀಶ್ ಆಚಾರ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply