ಎಳನೀರು ಮಾರಾಟ ವಿಚಾರವಾಗಿ ಇಬ್ಬರ ಯುವಕರ ನಡುವೆ ಗಲಾಟೆ ! ಮಚ್ಚಿನಿಂದ ಹಲ್ಲೆ ! ಆಸ್ಪತ್ರೆಗೆ ದಾಖಲು
ಭದ್ರಾವತಿ : ಎಳೆನೀರು ಮಾರಾಟದ ವಿಚಾರವಾಗಿ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದ್ದು , ಓರ್ವನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಇಂದು ಪ್ರಾಥಮಿಕ ವರದಿ ಶಿವಮೊಗ್ಗ ಎಕ್ಸ್ ಪ್ರೆಸ್ ಗೆ ಲಭ್ಯವಾಗಿದೆ.
ಭದ್ರಾವತಿಯ ಅಂಡರ್ ಬ್ರಿಡ್ಜ್ ಹತ್ತಿರ ಈ ಘಟನೆ ನಡೆದಿದ್ದು ಬೆಳಗ್ಗೆ ಎಳನೀರು ಮಾರಾಟ ಮಾಡುವ ವಿಚಾರವಾಗಿ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ.
ಸಲೀಂಖಾನ್ (24) ಎಂಬುವವನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದ್ದು ,ನೌಶದ್ ಎಂಬಾತನಿಂದ ಹಲ್ಲೆ ನಡೆದಿದೆ ಎನ್ನಲಾಗಿದ್ದು ಸಲೀಂಖಾನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
ಜಾಹಿರಾತು :
Leave a Reply