ಡಿ.12 ರಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜನತಾ ದರ್ಶನ ! ಈ ಬಾರಿ ಎಲ್ಲಿ ನಡೆಯುತ್ತೆ ಜನತಾ ದರ್ಶನ ?

ಡಿ.12 ರಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜನತಾ ದರ್ಶನ ! ಈ ಬಾರಿ ಎಲ್ಲಿ ನಡೆಯುತ್ತೆ ಜನತಾ ದರ್ಶನ ?

ಶಿವಮೊಗ್ಗ : ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಮಟ್ಟದ ಜನತಾದರ್ಶನಕ್ಕೆ ದಿನಾಂಕ ನಿಗದಿಯಾಗಿದ್ದು. ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು ಡಿ.12 ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಟೌನ್ ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದೆ. ಡಿ.12 ಬೆಳಿಗ್ಗೆ 10:30 ರಿಂದ ಜನತಾದರ್ಶನ ಕಾರ್ಯಕ್ರಮ ಶುರುವಾಗಲಿದ್ದು , ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನೇರವಾಗಿ ಸಲ್ಲಿಸಬಹುದು.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕಿಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಹಾಜರಿರುವುದರಿಂದ ಶಿಕಾರಿಪುರ ತಾಲ್ಲೂಕಿನ ಸಾರ್ವಜನಿಕರು ಜನತಾದರ್ಶದಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ಸಲ್ಲಿಸಲು ಇದೊಂದು ಸುವರ್ಣ ಅವಕಾಶವಾಗಿದೆ.

ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದಾಗಿದೆ. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶ ನೀಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ

ಜಾಹಿರಾತು :


Leave a Reply

Your email address will not be published.