ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರಂತೆ ವರ್ತಿಸದೆ, ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು – ಬಿ ವೈ ರಾಘವೇಂದ್ರ
ಶಿವಮೊಗ್ಗ : ಭದ್ರಾವತಿಯ ಬಿಜೆಪಿ ಕಾರ್ಯಕರ್ತ ಗೋಕುಲ್ ಅವರ ಮೇಲೆ ನಡೆದ ಹಲ್ಲೆ ಘಟನೆಗೆ ಸಂಬಂ ಧಿಸಿ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರಂತೆ ವರ್ತಿಸದೆ, ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ನಗರದಲ್ಲಿ ಶನಿವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋಕುಲ್ ಅವರ ಆರೋಗ್ಯ ವಿಚಾರಿಸಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಭದ್ರಾವತಿಯಲ್ಲಿ ಯುವಮೋರ್ಚಾ ಪದಾಧಿಕಾರಿ ಗೋಕುಲ್ ಮೇಲೆ ಶಾಸಕರ ಕಡೆಯವರು ಹಲ್ಲೆ ಮಾಡಿದ್ದಾರೆಂದು ಹೇಳಲಾಗುತ್ತಿದೆ.
ಆದರೆ ಕಾಂಗ್ರೆಸ್ ಮುಖಂಡರು ಗೋಕುಲ್ ಮೇಲೆಯೇ ಕೇಸು ದಾಖಲಿಸಿದ್ದಾರೆ. ಇದೆಲ್ಲ ಸರಿಯಲ್ಲ ಎಂದರು.
ಘಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳಿಗೆ ದೂರು ಕೊಟ್ಟರೂ ನಿರ್ಲಕ್ಷé ವಹಿಸಿದ್ದು, ಘಟನೆಯನ್ನು ಹಗುರವಾಗಿ ತೆಗೆದುಕೊಂಡಿದ್ದಾರೆ ಎಂದು ದೂರಿದ್ದಾರೆ
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply