ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ !ಯಾವಾಗ ಸೇರಲಿದೆ ಖಾತೆಗೆ ಹಣ ? ಯಾವಾಗ, ಎಲ್ಲಿ ನಡೆಯಲಿದೆ ಕಾರ್ಯಕ್ರಮ ?
ಶಿವಮೊಗ್ಗ : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯುವನಿಧಿ ಯೋಜನೆ ಜನವರಿ 12 ರಂದು ಶಿವಮೊಗ್ಗದಲ್ಲಿ ಜಾರಿಯಾಗಲಿದೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ , ರಾಜ್ಯ ಸರ್ಕಾರ ಐದು ಗ್ಯಾರಂಟಿಯನ್ನು ಘೋಷಣೆ ಮಾಡಿತ್ತು. ಐದನೇ ಗ್ಯಾರಂಟಿ ಶಿವಮೊಗ್ಗದಲ್ಲಿ ಜಾರಿ ಮಾಡುತ್ತಿದ್ದೇವೆ. ಡಿಸೆಂಬರ್ 26 ರಿಂದ ನೋಂದಣಿ ಕೂಡ ಆರಂಭವಾಗಲಿದೆ. ಜನವರಿ 12 ರಂದು ಶಿವಮೊಗ್ಗದಲ್ಲಿ ಯುವನಿಧಿ ಗ್ಯಾರಂಟಿಗೆ ಚಾಲನೆ ನೀಡುತ್ತೇವೆ. ಸ್ವಾಮಿ ವಿವೇಕಾನಂದ ಜಯಂತಿಯ ದಿನ ಚಾಲನೆ ನೀಡುತ್ತೇವೆ. ಆ ದಿನವೇ ಫಲಾನುಭವಿಗಳ ಖಾತೆಗೆ ಹಣ ಹೋಗಲಿದೆ ಎಂದರು.
ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು ಭಾಗಿಯಾಗುತ್ತಾರೆ. ರಾಜ್ಯದ ಎಲ್ಲಾ ಭಾಗದಿಂದಲೂ ಫಲಾನುಭವಿಗಳು ಭಾಗವಹಿಸುತ್ತಾರೆ. ಯುವಕರು ಅರ್ಜಿ ಹಾಕಿ, ಸರ್ಕಾರದ ಯೋಜನೆಯ ಲಾಭ ಪಡೆಯಬೇಕು. ಅದೇ ರೀತಿ ಬೇರೆ ಗ್ಯಾರಂಟಿ ಸಿಗದಿದ್ದರೆ, ಈಗಲೂ ಅವಕಾಶ ಇದೆ. ಸಂಬಂಧಪಟ್ಟ ಇಲಾಖೆಗೆ ಗ್ರಾ.ಪಂ ಮಟ್ಟದಲ್ಲೂ ಹೋಗಿ ಯೋಜನೆ ತಲುಪಿಸಲು ಹೇಳಿದ್ದಾರೆ. ಶಕ್ತಿ ಯೋಜನೆ ಮತ್ತಷ್ಟು ಅನುಷ್ಠಾನಕ್ಕೆ ಹೊಸ ಬಸ್ ಖರೀದಿ ಮಾಡಲಾಗುತ್ತಿದೆ ಎಂದರು
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply