ಶಿವಮೊಗ್ಗದಲ್ಲಿ 10ಕ್ಕೇರಿದ ಕೊರೋನ ಸೊಂಕೀತರ ಸಂಖ್ಯೆ ! ಇಂದು ಇಬ್ಬರಲ್ಲಿ ಕೊರೋನ ಪಾಸಿಟಿವ್ !
ಶಿವಮೊಗ್ಗ : ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ.
ಶಿವಮೊಗ್ಗ ಜಿಲ್ಲೆಯಲ್ಲೂ ಕೊರೋನ ಪ್ರಕರಣ ನಿಧಾನವಾಗಿ ಏರುತ್ತಿದ್ದು. ಜಿಲ್ಲಾ ಆರೋಗ್ಯ ಇಲಾಖೆ ಸಕಲ ಸಿದ್ಧತೆಯನ್ನ ಮಾಡಿಕೊಂಡಿದೆ.
ಇಂದು ಶಿವಮೊಗ್ಗದಲ್ಲಿ ಇಬ್ಬರಲ್ಲಿ ಕೊರೋನ ಪಾಸಿಟಿವ್ ಕಂಡುಬಂದಿದ್ದು, ಇವರಲ್ಲಿ ಒಬ್ಬರು ಶಿವಮೊಗ್ಗ ಮೂಲದವರು. ಮತ್ತೊಬ್ಬರು ಸೊರಬ ತಾಲೂಕಿಗೆ ಸೇರಿದವರಾಗಿದ್ದಾರೆ.
ಕೊರೊನಾ ಸೋಂಕು ಪತ್ತೆಯಾದ 10 ಜನರಲ್ಲಿ 8 ಜನರನ್ನ ಹೋಂ ಐಸೋಲೇಷನ್ ಗೆ ಒಳಪಡಿಸಲಾಗಿದ್ದು. ಇಬ್ಬರನ್ನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಟ್ಟು ಇಂದು 236 ಜನರಿಗೆ ಕೊರೋನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇವರಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಕೊರೊನಾ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply