BIG NEWS : ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ : ನೇರಲೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ !

BIG NEWS : ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ : ನೇರಲೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ !

ಶಿವಮೊಗ್ಗ : ಕೋಲಾರ, ಬೆಂಗಳೂರು ಬಳಿಕ ಇದೀಗ ಶಿವಮೊಗ್ಗದಲ್ಲೂ ಅಮಾನವೀಯ ಕೃತ್ಯ ನಡೆದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ಮಕ್ಕಳಿಂದ ಶಾಲೆಯ ಟಾಯ್ಲೆಟ್‌ ಕ್ಲೀನಿಂಗ್‌ ಮಾಡಿಸಲಾಗಿದೆ.

ಗುಡ್ಡದ ನೆರಲೇಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳಿಂದ ಮುಖ್ಯ ಶಿಕ್ಷಕ ಶೌಚಾಲಯ ಕ್ಲೀನ್‌ ಮಾಡಿಸಿದ್ದಾರೆ. ಮಕ್ಕಳನ್ನ ದುರ್ಬಳಕೆ ಮಾಡಿದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ. ಮಕ್ಕಳನ್ನು ಓದಿಸುವ ಬದಲು ಅವರ ಕೈಯಿಂದ ಈ ರೀತಿಯ ಕೆಲಸ ಮಾಡಿಸಿರುವುದು ನಿಜವಾಗ್ಲೂ ಅಮಾನವೀಯವಾಗಿದೆ. ಅಲ್ಲದೇ ಶಿಕ್ಷಕರ ವಿರುದ್ಧ ದಲಿತ ಸಂಘರ್ಷ ಸಮಿತಿಯಿಂದ ದೂರು ನೀಡಲಾಗಿದೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಗುಡ್ಡದ ನೇರಲೆಕೆರೆ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದಲೇ ಶೌಚಾಲಯಯವನ್ನು ಸ್ವಚ್ಛಗೊಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಹೆಡ್ ಮಾಸ್ಟರ್ ಶಂಕರಪ್ಪ, ಸಹಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸುವಂತಿಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಆದಾಗ್ಯೂ ಇಂತಹ ಘಟನೆಗಳು ಮರುಕಳಿಸುತ್ತಿರುವುದು ದುರಂತ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.