ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು !
ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನೀಚಡಿಯಲ್ಲಿ ತೋಟದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ
ಜಿಗಳೆ ಮನೆ ನಿವಾಸಿ ಬಂಗಾರಪ್ಪ ( 55) ಮೃತ ದುರ್ದೈವಿ.
ನೀಚಡಿಯ ತೋಟದ ಹತ್ತಿರ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ.
ಕಾಲು ಜಾರಿ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿ ಮೃತ ದೇಹವನ್ನು ಹೊರ ತೆಗೆದಿದ್ದಾರೆ
ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply