ಶಿವಮೊಗ್ಗಕ್ಕೆ ಇಂದು ಮೂವರು ಸಚಿವರ ಭೇಟಿ ! ಕಾರಣವೇನು?
ಶಿವಮೊಗ್ಗ : ಶಿವಮೊಗ್ಗಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರ ಜೊತೆ ರಾಜ್ಯ ಸರ್ಕಾರದ ಇಬ್ಬರು ಸಚಿವರು ಭೇಟಿ ನೀಡಲಿದ್ದಾರೆ.
ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಜನವರಿ 12ರಂದು ಆಯೋಜಿಸಲು ಉದ್ದೇಶಿಸಿರುವ ” ಯುವನಿಧಿ ಯೋಜನೆಯ ” ಚಾಲನೆ ಕಾರ್ಯಕ್ರಮದ ಕುರಿತು ನಡೆಯುವ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಜಿಲ್ಲಾಧಿಕಾರಿಗಳ ಸಭಾಂಗಣ ಸಭೆಯು ನಡೆಯಲಿರುವ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಸಾಕ್ಷರತಾ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ,ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್.ಪಾಟೀಲ್, ರವರು ಸಹ ಪಾಲ್ಗೊಳ್ಳಲಿದ್ದಾರೆ. ಇದರ ಜೊತೆಗೆ ಕೌಶಲ್ಯಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ಆಯುಕ್ತರಾದ ಡಾ. ಆರ್.ರಾಗಪ್ರಿಯಾ ಪಾಲ್ಗೊಳ್ಳಲಿದ್ದಾರೆ.
ಬಳಿಕ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿಕೊಟ್ಟು ಅಲ್ಲಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply