ಮಾರಕಾಸ್ತ್ರ ತೋರಿಸಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದ್ದ ಇಬ್ಬರು ಆರೋಪಿಗಳು ಅಂದರ್ !
ಭದ್ರಾವತಿ : ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಸ ಮನೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರಕಾಸ್ತ್ರ ತೋರಿಸಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿಯ ಹೊಸ ಮನೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷ್ ನಗರ ಲೇ ಔಟ್ ನಲ್ಲಿ,ಮಾರಕಾಸ್ತ್ರಗಳನ್ನು ತೋರಿಸುತ್ತಾ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದ್ದ. ಮತ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿತರಾದ 1) ಮಹಮ್ಮದ್ ಗೌಸ್, 23 ವರ್ಷ, ಅನ್ವರ್ ಕಾಲೋನಿ ಭದ್ರಾವತಿ ಮತ್ತು 2) ಮಹಮ್ಮದ್ ಮುಸ್ತಫಾ, 24 ವರ್ಷ ಆರೋಪಿಗಳನ್ನು ಬಂಧಿಸಿದ್ದಾರೆ.
ಇನ್ನೂ ಆರೋಪಿತರಿಂದ ಅಂದಾಜು ಮೌಲ್ಯ 15,000/- ರೂಗಳ 375 ಗ್ರಾಮ ತೂಕದ ಒಣ ಗಾಂಜಾ, ರೂ 1,000/- ನಗದು ಹಣ ಮತ್ತು 02 ಚಾಕುಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply