ಯುವನಿಧಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಕಡ್ಡಾಯ ಪಾಲ್ಗೊಳ್ಳುವಿಕೆ ಸುತ್ತೋಲೆಗೆ ಎಬಿವಿಪಿ ಆಕ್ಷೇಪ
ಶಿವಮೊಗ್ಗ ಯುವನಿಧಿ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳ ಕಡ್ಡಾಯ ಪಾಲ್ಗೊಳ್ಳುವಿಕೆ ಸುತ್ತೋಲೆಗೆ ಎಬಿವಿಪಿ ಆಕ್ಷೇಪ ವ್ಯಕ್ತಪಡಿಸಿ – ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ.
ಜ.12ರಂದು ಯುವನಿಧಿ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡುವ ಕಾರ್ಯಕ್ರಮವಿದೆ. ಈ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಮಾಡುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಖಂಡಿಸುತ್ತದೆ.
ಈಗಾಗಲೇ ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠಗಳೇ ನಡೆದಿಲ್ಲ.ಅಲ್ಲದೇ ಸರ್ಕಾರಿ ಕಾರ್ಯಕ್ರಮವು ಫಲಾನುಭವಿಗಳ ಸಮಕ್ಷಮದಲ್ಲಿ ನಡೆಯುವುದನ್ನು ಆಕ್ಷೇಪಿಸಲು ಆಗುವುದಿಲ್ಲ. ನಿರುದ್ಯೋಗಿಗಳಿಗೆ ಸಹಕಾರ ನೀಡುವ ಈ ಕಾರ್ಯ ಕ್ರಮದಲ್ಲಿ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವುದು ಎಷ್ಟರಮಟ್ಟಿಗೆ ಸರಿ. ಅಲ್ಲದೇ ಅಂದು ವಿವೇಕಾನಂದ ಜಯಂತಿ ಕೂಡ ಇದೆ. ಆದ್ದರಿಂದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ಎಬಿವಿಪಿ ಆಕ್ಷೇಪಿಸುತ್ತದೆ ಮತ್ತು ಸುತ್ತೋಲೆ ಯನ್ನು ಹಿಂಪಡೆಯಲು ಆಗ್ರಹಿಸುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಜಾಹಿರಾತು :
ಈ ಸಂದರ್ಭದಲ್ಲಿ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಪ್ರವೀಣ್ ಹೆಚ್.ಕೆ. ಸೇರಿದಂತೆ ಹಲವರಿದ್ದರು.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply