ಶಿವಮೊಗ್ಗದಲ್ಲಿ ಪಂಜು ಹಿಡಿದು ಮೆರವಣಿಗೆ ನಡೆಸಿದ ಸಚಿವರು ! ಕಾರಣವೇನು ?

ಶಿವಮೊಗ್ಗದಲ್ಲಿ ಪಂಜು ಹಿಡಿದು ಮೆರವಣಿಗೆ ನಡೆಸಿದ ಸಚಿವರು ! ಕಾರಣವೇನು ?

ಶಿವಮೊಗ್ಗ : ಶಿವಮೊಗ್ಗದಲ್ಲಿ ಕಾಂಗ್ರೆಸ್‌ನ 5ನೇ ಗ್ಯಾರಂಟಿ ಯುವನಿಧಿ ಯೋಜನೆ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿ ಸಂಘಟನೆ ಎನ್ ಎಸ್ ಯು ಐ ಶಿವಮೊಗ್ಗ ವತಿಯಿಂದ ಯುವಜ್ಯೋತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಾಥದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪಂಜು ಹಿಡಿದು ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು.

ನಾಳೆ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್‌ನ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಂದ ಚಾಲನೆ ಸಿಗಲಿದೆ. ನಿನ್ನೆ ಸ್ಥಳ ಪರಿಶೀಲನೆಗಾಗಿ ಸಚಿವರು ಶಿವಮೊಗ್ಗಕ್ಕೆ ಬಂದಿದ್ದರು, ಈ ನಡುವೆ ನಿನ್ನೆ ಸಂಜೆ ವಿದ್ಯಾರ್ಥಿ ಸಂಘಟನೆ ಎನ್ ಎಸ್ ಯು ಐ ವತಿಯಿಂದ ಯುವ ಜ್ಯೋತಿ ಜಾಥವನ್ನು ಹಮ್ಮಿಕೊಂಡಿದ್ದು, ಈ ವೇಳೆ ಸಚಿವರುಗಳು ನೂರಾರು ಕಾರ್ಯಕರ್ತರ ಜೊತೆಗೆ ಕಂಡುಹಿಡಿದು ಹೆಜ್ಜೆ ಹಾಕಿದ್ದಾರೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

ಯುವ ಜ್ಯೋತಿ ಜಾಥಾವು ಶಿವಮೊಗ್ಗ ನಗರದ ಜೈಲ್ ವೃತ್ತದಿಂದ ಟಿ.ಸೀನಪ್ಪ ಶೆಟ್ಟಿ ( ಗೋಪಿ ವೃತ್ತ ) ವೃತ್ತದವರೆಗೂ ನಡೆಯಿತು. ನೂರಾರು ಎನ್ ಎಸ್ ಯು ಐ ಕಾರ್ಯಕರ್ತರು ಜಾಥಾದಲ್ಲಿ ಪಾಲ್ಗೊಂಡಿದ್ದರು. ಯುವ ನಿಧಿ ಯುವಕರ ಆಶಾನಿಧಿ ಸೇರಿದಂತೆ ವಿವಿಧ ಘೋಷಣೆಗಳನ್ನು ಪ್ರದರ್ಶಿಸಲಾಯಿತು.

ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಮಾತನಾಡಿ, ‌ಯುವನಿಧಿ ಯೋಜನೆ ಕುರಿತು ಜಾಗೃತಿ ಮೂಡಿಸುವ ಆಶಯದಿಂದ ಶಿವಮೊಗ್ಗ ಜಿಲ್ಲಾ‌ ಎನ್ ಎಸ್ ಯು ಐ ಘಟಕ ಯುವ ಜ್ಯೋತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲಾ ಮಟ್ಟದಲ್ಲಿ ಎನ್ ಎಸ್ ಯು ಐ ಉತ್ತಮ‌‌ ಕೆಲಸ‌ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ‌ ಮಧು ಬಂಗಾರಪ್ಪ ಮಾತನಾಡಿ, ಸಿಎಂ ಸಿದ್ದರಾಮಯ್ಯ ಜನವರಿ‌12ರ‌ ಶಿವಮೊಗ್ಗ ಕಾರ್ಯಕ್ರಮದಲ್ಲಿ ಯುವನಿಧಿ‌ ಯೋಜನೆಗೆ ಚಾಲನೆ ನೀಡಲಿದ್ದು, ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳು ಹಾಗೂ ಪದವಿ ವಿದ್ಯಾರ್ಥಿಗಳು ಯೋಜನೆಯ ಅನುಷ್ಠಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡರಾದ ರಮೇಶ್ ಹೆಗ್ಡೆ, ಎಚ್.ಸಿ.ಯೋಗೀಶ್, ಆರ್.ಪ್ರಸನ್ನಕುಮಾರ್, ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ವಿಜಯ್,‌ ಮಧುಸೂದನ್, ಕೆ.ಚೇತನ್, ಚರಣ್, ಹರ್ಷಿತ್, ರವಿ ಕಾಟಿಕೇರೆ, ಕಲೀಂ ಪಾಷಾ, ದೇವೆಂದ್ರಪ್ಪ, ಸಂತೆಕುಡೂರು ವಿಜಯ್, ಧೀರಜ್, ರಂಗೇ ಗೌಡರು ಮತ್ತಿತರರು ಜಾಥಾದಲ್ಲಿ ಹೆಜ್ಜೆ ಹಾಕಿದರು.

ವರದಿ : ಲಿಂಗರಾಜ್ ಗಾಡಿಕೊಪ್ಪ


Leave a Reply

Your email address will not be published.