ಜೋರಾಯ್ತು ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ಚರ್ಚೆ ! ಯಾವಾಗ ಆಯ್ಕೆ  ? ಯಾರ್ಯಾರು ಇದ್ದಾರೆ ರೇಸ್ ನಲ್ಲಿ ?

ಜೋರಾಯ್ತು ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ಚರ್ಚೆ ! ಯಾವಾಗ ಆಯ್ಕೆ ? ಯಾರ್ಯಾರು ಇದ್ದಾರೆ ರೇಸ್ ನಲ್ಲಿ ?

ಶಿವಮೊಗ್ಗ : ಬಿವೈ ವಿಜಯೇಂದ್ರ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ, ಶಿವಮೊಗ್ಗ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರ ಆಯ್ಕೆಯ ಚರ್ಚೆಯು ಜೋರಾಗಿದೆ. ಬಿ ವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಬಿಜೆಪಿಯಲ್ಲಿ ಎಲ್ಲಾ ಪದಾಧಿಕಾರಿಗಳ ಬದಲಾವಣೆ ಆಗಲಿದೆ.

ಇನ್ನು ಬಿಜೆಪಿ ಜಿಲ್ಲಾಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ ಯಾವಾಗ ಆಗಲಿದೆ ಎಂಬ ಕುತೂಹಲ ಬಿಜೆಪಿ ಕಾರ್ಯಕರ್ತರ ಮನದಲ್ಲಿ ಮನೆ ಮಾಡಿದೆ. ಹಾಲಿ ಬಿಜೆಪಿ ಜಿಲ್ಲಾಧ್ಯಕ್ಷರ ಟಿ ಡಿ ಮೇಘರಾಜ್ ರವರ ಅವಧಿ ಐದು ವರ್ಷಗಳು ಕಳೆದಿದ್ದು ಜಿಲ್ಲಾಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳು ಸೇರಿ ಹೊಸ ಪದಾಧಿಕಾರಿಗಳು ಅಸ್ತಿತ್ವಕ್ಕೆ ಬರಲಿದ್ದಾರೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

ಈಗಾಗಲೇ ಬಿಜೆಪಿಯ ಕೇಂದ್ರ ಕಚೇರಿಯಿಂದ ಇಬ್ಬರು ವೀಕ್ಷಕರು ಶಿವಮೊಗ್ಗಕ್ಕೆ ಬಂದು ಸಾಕಷ್ಟು ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಮಾಜಿ ಶಾಸಕರು, ಮಾಜಿ ಸಚಿವರು, ಭೂತ್ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು ಸೇರಿದಂತೆ ಸುಮಾರು 40 ಮಂದಿಯಿಂದ ಶೈಲೇಂದ್ರ ಬೆಂದಾಳೆ ಮತ್ತು ಅಶ್ವಿನ್ ಗೌಡ ಎಂಬುವವರು ಮಾಹಿತಿ ಸಂಗ್ರಹಿಸಲಾಗಿದೆ ಎಂದು ತಿಳಿದು ಬಂದಿದೆ.

ಯಾರ್ಯಾರಿದ್ದಾರೆ ರೇಸ್ ನಲ್ಲಿ ?

ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆಗೆ ಈಗಾಗಲೇ ಮೂರು ಜನರ ಹೆಸರು ಓಡಾಡುತ್ತಿದ್ದು. ಪ್ರಸನ್ನ ಕೆರೆಕೈ, ಹರಿಕೃಷ್ಣ, ಶಿವರಾಜ್, ರವರ ಹೆಸರು ಹರಿದಾಡುತ್ತಿದೆ. ಈಗಾಗಲೇ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ಕುತೂಹಲ ಮೂಡಿಸಿದ್ದು. ಜಿಲ್ಲಾಧ್ಯಕ್ಷರ ಆಯ್ಕೆ ಸಂಕ್ರಮಣದ ಒಳಗಡೆ ಆಗಬಹುದು ಎಂದು ಕೆಲವರು ಹೇಳುತ್ತಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.