ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮೊದಲ ಬಾರಿಗೆ ಏರ್ ಲಿಫ್ಟ್ ಅದ ಮೊದಲ ಏರ್ ಆಂಬುಲೆನ್ಸ್‌ ! 

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮೊದಲ ಬಾರಿಗೆ ಏರ್ ಲಿಫ್ಟ್ ಅದ ಮೊದಲ ಏರ್ ಆಂಬುಲೆನ್ಸ್‌ !

ಶಿವಮೊಗ್ಗ ನಗರದ ಹೃದ್ರೋಗಿಯೊಬ್ಬರನ್ನು ಏರ್ ಆಯಂಬುಲೆನ್ಸ್ ಮೂಲಕ ಮಂಗಳೂರಿಗೆ ರವಾನಿಸಿ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಸಾಗಿಸಿ, ಅವರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವ ಯಶಸ್ವಿ ಕಾರ್ಯಾಚರಣೆ ನಡೆದಿದೆ.

ಶಿವಮೊಗ್ಗ ಚೇತನ್‌ ಎಂಬುವವರು ಜ.8ರಂದು ನೆಹರು ಕ್ರೀಡಾಂಗಣದಲ್ಲಿ ಜಾಗಿಂಗ್‌ ವೇಳೆ ಕುಸಿದು ಬಿದ್ದಿದ್ದರು.ತಕ್ಷಣ ಅವರನ್ನು ಪಕ್ಕದ ಮೆಟ್ರೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದುದರಿಂದ ನೆನ್ನೆ ಬೆಳಗ್ಗೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಏರ್ ಆಯಂಬುಲೆನ್ಸ್ ಮೂಲಕ ಅವರನ್ನು ಸುರಕ್ಷಿತವಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಯ್ತು. ಸದ್ಯ ಚೇತನ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇದೆ ಮೊದಲ ಬಾರಿಗೆ ಏರ್‌ ಆಂಬುಲೆನ್ಸ್‌ ಶಿವಮೊಗ್ಗದಿಂದ ಕಾರ್ಯಾಚರಿಸಿದೆ.

ಈ ಸಂದರ್ಭದಲ್ಲಿ ಸಹಕರಿಸಿದ ಆಸ್ಪತ್ರೆ ಸಿಬ್ಬಂದಿಗೆ, ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಸಂಸದ ಬಿ ವೈ ರಾಘವೇಂದ್ರ ಧನ್ಯವಾದ ಸಲ್ಲಿಸಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.