ಶಿವಮೊಗ್ಗದಲ್ಲಿ ಯುವನಿಧಿ ಕಾರ್ಯಕ್ರಮಕ್ಕೆ ಸಿಎಂ ಚಾಲನೆ, ಇಂದಿನಿಂದಲೇ ನಿರುದ್ಯೋಗಿಗಳಿಗೆ ಸಿಗಲಿದೆ ‘ಯುವನಿಧಿ’ ಹಣ 

ಶಿವಮೊಗ್ಗದಲ್ಲಿ ಯುವನಿಧಿ ಕಾರ್ಯಕ್ರಮಕ್ಕೆ ಸಿಎಂ ಚಾಲನೆ, ಇಂದಿನಿಂದಲೇ ನಿರುದ್ಯೋಗಿಗಳಿಗೆ ಸಿಗಲಿದೆ ‘ಯುವನಿಧಿ’ ಹಣ

ಶಿವಮೊಗ್ಗ : ವಿಧಾನಸಭಾ ಚುನಾವಣೆಗೂ ಮುನ್ನ ನೀಡಿದ ಆಶ್ವಾಸನೆಯಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರ ತನ್ನ ಐದು ಗ್ಯಾರಂಟಿಗಳ ಪೈಕಿ ಐದನೇ ಗ್ಯಾರಂಟಿ ಯೋಜನೆಯಾದ ‘ಯುವನಿಧಿ ಯೋಜನೆ’ಗೆ ಇಂದು ಅದ್ಧೂರಿ ಚಾಲನೆ ನೀಡಿದೆ.

ಶಿವಮೊಗ್ಗದಲ್ಲಿ ನಡೆದ ಬೃಹತ್‌ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಇಡೀ ಸಚಿವ ಸಂಪುಟವೇ ನೆರೆದಿತ್ತು.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

ವಿವೇಕಾನಂದರ ಜನ್ಮದಿನವಾದ ರಾಷ್ಟ್ರೀಯ ಯುವದಿನದಂದೇ ಯುವನಿಧಿ ಕಾರ್ಯಕ್ರಮಕ್ಕೆ ಚಾಲನೆ ಸಿಗ್ತಿರೋದು ವಿಶೇಷವಾಗಿದೆ. ಕಾರ್ಯಕ್ರಮದ ಆರಂಭದಲ್ಲಿ ಸ್ವಾಮಿ ವಿವೇಕಾನಂದ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿದರು.

ನಂತರ ಸುಮಾರು ಒಂದು ಲಕ್ಷದಷ್ಟು ಜನರು ಸೇರಿದ್ದ ಈ ಬೃಹತ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯೋಜನೆಯಾದ ಡಿಪ್ಲೊಮಾ- ಪದವೀಧರರ ಖಾತೆಗೆ ಪ್ರತಿ ತಿಂಗಳು ಹಣ ಹಾಕುವ ‘ಯುವನಿಧಿ ಯೋಜನೆ‌’ಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಯುವನಿಧಿ ಯೋಜನೆಯ ಪ್ರಕಾರ ಮುಂದಿನ 2 ವರ್ಷಗಳವರೆಗೆ ಪ್ರತೀ ತಿಂಗಳು ಪದವೀಧರರಿಗೆ ₹3000 ಮತ್ತು ಡಿಪ್ಲೋಮಾ ಪದವೀಧರರಿಗೆ ₹1500 ರೂಪಾಯಿ ಸಿಗಲಿದೆ. 

ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಈ ಬೃಹತ್ ಕಾರ್ಯಕ್ರಮದಲ್ಲಿ ಶಿವಮೊಗ್ಗ, ದಾವಣಗೆರೆ, ಹಾವೇರಿ, ಚಿತ್ರದುರ್ಗ, ಕಾರವಾರ, ಚಿಕ್ಕಮಗಳೂ ಸೇರಿದಂತೆ ವಿವಿಧೆಡೆಯಿಂದ ಯುವಕ ಯುವತಿಯರು ಸೇರಿದಂತೆ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನರು ಆಗಮಿಸಿದರು. ಕಾರ್ಯಕ್ರಮಕ್ಕೆ ವಿಶೇಷ ವಿಮಾನದ‌ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಆಗಮಿಸಿದರು.

ಪೊಲೀಸ್‌ ಇಲಾಖೆಯಿಂದ ಬಿಗಿ ಬಂದೋಬಸ್ತ್‌

ಇನ್ನು ಯುವನಿಧಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಶಿವಮೊಗ್ಗ ನಗರದೆಲ್ಲೆಡೆ ಖಾಕಿ ಕಣ್ಗಾವಲು ಇಟ್ಟಿದೆ. ಜಿಲ್ಲಾದ್ಯಂತ 2000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಯುವನಿಧಿ ಕಾರ್ಯಕ್ರಮಕ್ಕೆ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

ಇದರ ಜೊತೆ ಶಿವಮೊಗ್ಗ ನಗರದಲ್ಲಿ ಟ್ರಾಫಿಕ್ ತೊಂದರೆ ಆಗದಂತೆಯೂ ಪೊಲೀಸ್ ಇಲಾಖೆ ಕ್ರಮ ವಹಿಸಿದ್ದು, ಹಲವು ಮಾರ್ಗಗಳನ್ನು ಬದಲಾವಣೆ ಮಾಡಿ ಜಿಲ್ಲಾಡಳಿತ ಜನರಿಗೆ ಸೂಚನೆ ನೀಡಿದೆ. ಜೊತೆಗೆ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಾಲ್ಕು ಬಿಜೆಪಿ ಕಾರ್ಯಕರ್ತರಿಗೆ ನೋಟೀಸ್ ಅನ್ನು ಕೂಡ ನೀಡಲಾಗಿದೆ.

ಊಟದ ವ್ಯವಸ್ಥೆ ತಯಾರು

ಇನ್ನು, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಊಟದ ವ್ಯವಸ್ಥೆಯನ್ನು ಸಹ ಜಿಲ್ಲಾಡಳಿತ ಮಾಡಿಕೊಂಡಿದ್ದು, ಊಟಕ್ಕೆ ಪಲಾವ್, ಮೊಸರನ್ನ, ಉಪ್ಪಿನಕಾಯಿ ಬಜ್ಜಿ ಸೇರಿದಂತೆ ಮಧ್ಯಾಹ್ನದ ಊಟಕ್ಕೆ ಮೆನು ಅನ್ನು ತಯಾರು ಮಾಡಲಾಗಿತ್ತು. ಅಡುಗೆ ತಯಾರಿ ಹಾಗೂ ಊಟ ಬಡಿಸಲು 850 ಜನರನ್ನು ನಿಯೋಜನೆ ಮಾಡಲಾಗಿದೆ. ಊಟ ನೀಡುವ ಜಾಗದಲ್ಲಿ ನೂಕು ನುಗ್ಗಲು ಉಂಟಾಗದಂತೆ ಮೂರು ವಿಭಾಗಗಳನ್ನು ಮಾಡಿಕೊಳ್ಳಲಾಗಿದ್ದು, ಒಟ್ಟು 160 ಕೌಂಟರ್‌ನಲ್ಲಿ ಊಟ ನೀಡಲು ತಯಾರಿ ಮಾಡಿಕೊಳ್ಳಲಾಗಿತ್ತು.

ಬರೋಬ್ಬರಿ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದ್ದು, ಸಾವಿರಾರು ಮಂದಿ ಒಂದೇ ಬಾರಿಗೆ ಊಟಕ್ಕೆ ಬಂದರೂ ನಿಭಾಯಿಸಲು ಕ್ರಮ ವಹಿಸಲಾಗಿದೆ.


Leave a Reply

Your email address will not be published.